ಲಕ್ನೋ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯನ್ನು ಆಕೆಯ ಪತಿ ಮತ್ತು ಅತ್ತೆ-ಮಾವ ಹತ್ಯೆ ಮಾಡಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ (Greater Noida) ನಡೆದಿದೆ.
ನಿಕ್ಕಿ (26) ಕೊಲೆಯಾದ ಮಹಿಳೆ. ಪತಿ ಮತ್ತು ಅತ್ತೆ-ಮಾವ ಸೇರಿಕೊಂಡು ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಇದರ ಭಯಾನಕ ದೃಶ್ಯಗಳು ಹೊರಬಿದ್ದಿವೆ. 36 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟು, ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ | ಗಜ ದ್ವಾರದ ಬಳಿಯ ಮರ ಶಿಫ್ಟ್‌ಗೆ ನಿರ್ಧಾರ
ಮೃತ ಮಹಿಳೆ ನಿಕ್ಕಿ 2016 ರಲ್ಲಿ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದ ವಿಪಿನ್ ಎಂಬಾತನನ್ನು ವಿವಾಹವಾಗಿದ್ದರು. ಕೇವಲ ಆರು ತಿಂಗಳ ನಂತರ ವರದಕ್ಷಿಣೆಗಾಗಿ ಹಿಂಸೆ ಪ್ರಾರಂಭವಾಯಿತು. ನಿಕ್ಕಿಯನ್ನು ಅವರ ಅತ್ತೆ-ಮಾವಂದಿರು ಥಳಿಸಿ, ನಂತರ ಮಗನ ಮುಂದೆ ಬೆಂಕಿ ಹಚ್ಚಿದ್ದಾರೆ ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ.
ನಿಕ್ಕಿಯ ಪತಿ ವಿಪಿನ್ ಮತ್ತು ಇನ್ನೊಬ್ಬ ಮಹಿಳೆ ಆಕೆಯ ಕೂದಲನ್ನು ಹಿಡಿದು ಎಳೆಯುತ್ತಿರುವುದನ್ನು ವೀಡಿಯೊದಲ್ಲಿದೆ. ವಿಪಿನ್ ಶರ್ಟ್ ಧರಿಸಿರಲಿಲ್ಲ. ನಂತರ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಸುಟ್ಟಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ವಾಟ್ಸಪ್‌ನಲ್ಲಿ ಬಂತು ಮದುವೆ ಕಾರ್ಡ್ – ಕ್ಲಿಕ್ ಮಾಡ್ತಿದ್ದಂಗೆ 2 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ
ಗುರುವಾರ ರಾತ್ರಿ ಆಸ್ಪತ್ರೆಗೆ ಮಹಿಳೆಯೊಬ್ಬರು ಸುಟ್ಟ ಗಾಯಗಳಿಂದ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಸಹೋದರಿ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಮೃತಳ ಪತಿಯನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.