ಹೈದರಾಬಾದ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ (Hyderabad) ಗಜುಲರಾಮರಂನ (Gajularamaram) ಬಾಲಾಜಿ ಲೇಔಟ್‌ನಲ್ಲಿ ನಡೆದಿದೆ.
ಆಶಿಶ್ ರೆಡ್ಡಿ(8), ಅರ್ಷಿತ್ ರೆಡ್ಡಿ(6) ಎಂಬ ಇಬ್ಬರು ಗಂಡು ಮಕ್ಕಳನ್ನು ತೇಜಸ್ವಿನಿ(33) ತೆಂಗಿನಕಾಯಿ ತುರಿಯುವ ಮಣೆಯಿಂದ (Coconut Chopper) ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ತಾಯಿ, ಮಗನ ಕೊಲೆ ಕೇಸ್ – ಪೊಲೀಸರಿಗೆ ಹೆದರಿ ಆರೋಪಿ ನೇಣಿಗೆ ಶರಣು
ಮನೆಯಲ್ಲಿ ಕಿರುಚಾಟದ ಶಬ್ದ ಕೇಳಿದ್ದರಿಂದ ಬಂದು ನೋಡಿದಾಗ ಮಕ್ಕಳಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಅರ್ಷಿತ್ ರೆಡ್ಡಿ ಗಂಭೀರ ಸ್ಥಿತಿಯಲ್ಲಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ಹೇಳಿದರು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಪೈಲಟ್ ಆಗಬಹುದು!
7 ಪುಟಗಳ ಡೆತ್‌ನೋಟ್ (Suicide Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತೇಜಸ್ವಿನಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಪುತ್ರರಿಬ್ಬರ ಉಸಿರಾಟದ ತೊಂದರೆ ಹಾಗೂ ಪತಿಯ ಬೆಂಬಲದ ಕೊರತೆಯಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುದ್ದು ಮಗಳಿಗೆ ಸುಂದರ ಹೆಸರಿಟ್ಟ ಅಥಿಯಾ ಶೆಟ್ಟಿ ದಂಪತಿ- ಅದರ ಅರ್ಥವೇನು ಗೊತ್ತಾ?
ಘಟನಾ ಸ್ಥಳಕ್ಕೆ ಜೀಡಿಮೆಲ್ಲಾ ಪೊಲೀಸರು (Jeedimetla Police) ಭೇಟಿ ನೀಡಿ, ಪರಿಸೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.