ಲಕ್ನೊ: 55 ವರ್ಷದ ಮಹಿಳೆಯನ್ನು ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 4 ಜನ ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಈ ಕುರಿತಂತೆ ಮಾತನಾಡಿದ ಡಿಸಿಪಿ ವೃಂದಾ ಶುಕ್ಲಾ ಅವರು, ಬೆಳಗ್ಗೆ 10 ಗಂಟೆ ಸುಮಾರಿಗೆ ಮಹಿಳೆ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಿಳೆ ಆರೋಪಿಯೊಬ್ಬನ ಗುರುತನ್ನು ಪತ್ತೆ ಹಚ್ಚಿದ್ದು, ಆತ ತಮ್ಮ ಗ್ರಾಮದವನೇ ಆಗಿದ್ದಾನೆ ಮತ್ತು ಅದೇ ಜಮೀನಿನಲ್ಲಿ ಜಾನುವಾರುಗಳಿಗೆ ಹುಲ್ಲು ಮೇಯಿಸುತ್ತಿದ್ದ ಎಂದು ತಿಳಿಸಿದ್ದಾರೆ. ಇದೀಗ ಉಳಿದ ಮೂವರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕೇಕ್ ಮೇಲೆ ಗಂಡ ಎಂದು ಬರೆಸಿದ ನುಸ್ರತ್ – ಯಶ್ ಜೊತೆಗಿನ ವಿವಾಹದ ಬಗ್ಗೆ ಸುಳಿವು ಕೊಟ್ರಾ?
ಮಹಿಳೆ ನೀಡಿರುವ ದೂರಿನ ಪ್ರಕಾರ, ಆಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಆರೋಪಿ ಮತ್ತು ಆತನ ಸಹಚರರು ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಮಹಿಳೆ ಕೂಡಲೇ ತನ್ನ ಮನೆಗೆ ಆಗಮಿಸಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಬಳಿಕ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆಯ ನೆಪದಲ್ಲಿ ಶಿಕ್ಷಕನಿಂದ ಪದೇ, ಪದೇ ಅತ್ಯಾಚಾರ
ಇದೀಗ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಳಿಗೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಮತ್ತು ಆಕೆಯ ಸ್ಥಿತಿ ಸ್ಥಿರವಾಗಿದೆ. ಅಲ್ಲದೇ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‍ಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೊತೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.