ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ವ್ಯಾಪ್ತಿಯಲ್ಲಿ ನಡೆದಿದೆ.
ಜ್ಯೋತಿ (29) ಮೃತ ಮಹಿಳೆ. ಅವರು ಮೂಲತಃ ಹೆಚ್.ಡಿ.ಕೋಟೆ ತಾಲೂಕಿನ ಸರಗೂರಿನವರಾಗಿದ್ದರು. ಪತಿ ಶರತ್ ಕುಮಾರ್ ಹಾಗೂ ನಾಲ್ಕು ವರ್ಷದ ಮಗುವಿನೊಂದಿಗೆ ಕುಂಬಳಗೋಡು ಸಮೀಪದ ಕೊಮ್ಮಘಟ್ಟದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಇದನ್ನೂ ಓದಿ:Bengaluru | ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ಜ್ಯೋತಿ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ನಿನ್ನೆ ಬೆಳಗಿನ ಜಾವ ಕೊಮ್ಮಘಟ್ಟ ಕೆರೆಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಬೆಂಗಳೂರು | ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ
ಘಟನೆ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
