ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಜಮೀನೊಂದರಲ್ಲಿ ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ದಂಡೋತಿ ಗ್ರಾಮದ ಶುಕರಾ ಬಿ (55) ಕೊಲೆಯಾದ ದುರ್ದೈವಿ. ಶುಕಾರಾರವರು ಗುರುವಾರ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರ ಬಾಯಿಗೆ ಬಟ್ಟೆ ತುರುಕಿ ಹತ್ಯೆ ಮಾಡಿ ಹೋಗಿದ್ದಾರೆ. ಮುಂಜಾನೆ ಕೆಲಸಕ್ಕೆ ಹೋದ ಶುಕರಾರವರು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಡರಾತ್ರಿ 11ರ ಸಮಯದಲ್ಲಿ ಅವರ ಮೃತದೇಹ ಜಮೀನಿನಲ್ಲಿ ಪತ್ತೆಯಾಗಿದೆ.
Advertisement
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ, ಘಟನೆ ಸಂಬಂಧ ಮೂಡಬೂಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.