ಹೆಲ್ಮೆಟ್‌ನಿಂದ ಹೊಡೆದು 3 ತಿಂಗಳ ಗರ್ಭಿಣಿಯನ್ನು ಕೊಂದು ಅಪಘಾತವೆಂದ ಪತಿ!

Public TV
1 Min Read
DAVANAGERE MURDER

ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮೃತಳನ್ನು ಯಶೋದಾ ಎಂದು ಗುರುತಿಸಲಾಗಿದ್ದು, ಈಕೆ 3 ತಿಂಗಳ ಗರ್ಭಿಯಾಗಿದ್ದರು. ಇದೇ ತಿಂಗಳ 4 ರಂದು ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಜೀವನದಲ್ಲಿ ಭರವಸೆಯಿಲ್ಲ, ಜೈಲಿನಲ್ಲೇ ಸಾಯೋದು ಉತ್ತಮ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ಗೋಯಲ್‌

ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋದಾ, ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತನನ್ನ ಪ್ರೀತಿಸಿ ಆರು ತಿಂಗಳ ಹಿಂದೆ ಮದುವೆ ಆಗಿದ್ದರು. ಅಂತೆಯೇ ಜನವರಿ 4 ರಂದು ಪತಿ ಜೊತೆ ಯಶೋದಾ ತವರಿಗೆ ಬಂದಿದ್ದರು. ತವರು ಮನೆಯಿಂದ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿ ಯಶೋದಾ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರಿಗೆ ಪತಿ ತಿಪ್ಪೇಶ್ ಮಾಹಿತಿ‌ ನೀಡಿದ್ದ.

ಇತ್ತ ಯಶೋದಾಳ ಶವ ನೋಡಿದ ತಂದೆ ಚಂದ್ರಪ್ಪಗೆ ಕೊಲೆ ಶಂಕೆ ವ್ಯಕ್ತವಾಗಿದೆ. ತನ್ನ ಪುತ್ರಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಕೊಲೆಯಾಗಿದೆ ಎಂದು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ. ತಾನೇ ಹೊಡೆದು ಸಾಯಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article