ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

Public TV
1 Min Read
basaveshwar nagar police station

ಬೆಂಗಳೂರು: ಗಂಡನೇ ಹೆಂಡ್ತಿ (Wife Murdered By Husband) ಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ, ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಟ್ಟಿದ್ದ ಅಯ್ಯಪ್ಪ, ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಸವೇಶ್ವರ ನಗರ ಪೊಲೀಸರಿಂದ ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆ (Basaveshwar nagar Police Station) ಯಲ್ಲಿ ಪ್ರಕರಣ ದಾಖಲಾಗಿದೆ.

Share This Article