ವಿಜಯಪುರ: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ ನಡೆದ ಘಟನೆ ನಡೆದಿದೆ. ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ಘಟನೆ ನಡೆದಿದೆ. 54 ವರ್ಷದ ಶಾಂತಾಬಾಯಿ ತಳವಾರ ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ. ಇದನ್ನೂ ಓದಿ; ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು
ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಂದಗಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.