ಹಾಡಹಗಲೇ ಮನೆಯಲ್ಲಿದ್ದ ಒಂಟಿ ಮಹಿಳೆಯ ಕತ್ತು ಹಿಸುಕಿದ ದುಷ್ಕರ್ಮಿಗಳು

Public TV
1 Min Read
ANEKAL MURDER

ಆನೇಕಲ್/ಬೆಂಗಳೂರು:‌ ಹಾಡಹಗಲೇ ಗೃಹಿಣಿಯೋರ್ವಳನ್ನ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ (ITBT) ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ.

ಮೃತ ಮಹಿಳೆಯನ್ನು ನೀಲಂ(30) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾಗಿರುವ ಈಕೆ ತನ್ನ ಕುಟುಂಬದ ಜೊತೆ ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.

ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ. ಆದರೆ ದುಷ್ಕರ್ಮಿಗಳು ಯಾವುದೇ ಒಡವೆ, ಹಣವನ್ನು ಕದ್ದಿಲ್ಲ. ಹೀಗಾಗಿ ಈ ಕೊಲೆಯ ಹಿಂದೆ ಅನುಮಾನಗಳು ಹುಟ್ಟಿಕೊಂಡಿವೆ. ಇದನ್ನೂ ಓದಿ: ಡಬಲ್ ಬ್ಯಾರೆಲ್ ಗನ್‌ನಿಂದ ಶೂಟ್ ಮಾಡಿಕೊಂಡು BE ವಿದ್ಯಾರ್ಥಿ ಆತ್ಮಹತ್ಯೆ‌

ANEKAL MURDER STORY

ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಶ್ವಾನದಳ ಹಾಗೂ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಪರಿಚಿತರೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಆಕೆಯ ಕಾಲ್ ಡಿಟೈಲ್ಸ್ ಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ಆರೋಪಿಯನ್ನ ಬಂಧಿಸಲು ವಿಶೇಷ ತಂಡ ಮಾಡಲಾಗಿದೆ ಎಂದು ಅಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಹೇಳಿದ್ದಾರೆ.

ಈ ಕೊಲೆ ಲಾಭಕ್ಕಾಗಿ ಅಲ್ಲ ಬಹುಶಃ ವೈಯಕ್ತಿಕ ವಿಚಾರವಾಗಿ ನಡೆದಿರುವ ಶಂಕೆ ವ್ಯಕ್ತವಾಗಿದೆ.‌ ಒಟ್ಟಿನಲ್ಲಿ ಕೊಲೆ ಯಾವೊಂದು ವಿಚಾರವಾಗಿ ನಡೆದಿದೆ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Share This Article