ತಿರುವನಂತಪುರಂ: ಮಹಿಳಾ ಪೊಲೀಸ್ ಅಧಿಕಾರಿಗೆ ಓರ್ವ ಟ್ರಾಫಿಕ್ ಪೊಲೀಸ್ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಕೇರಳದಲ್ಲಿ ಇಂದು ನಡೆದಿದೆ.
ಸೌಮ್ಯಾ ಪುಷ್ಪಕರಣ್ (34) ಮೃತ ಮಹಿಳಾ ಪೊಲೀಸ್ ಅಧಿಕಾರಿ. ಅಜಾಝ್ ಕೃತ್ಯ ಎಸಗಿದ ಟ್ರಾಫಿಕ್ ಪೊಲೀಸ್. ಘಟನೆಯಲ್ಲಿ ಅಜಾಝ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.
Advertisement
ಸೌಮ್ಯಾ ಪುಷ್ಪಕರಣ್ ಅಲಪ್ಪುಳ ಜಿಲ್ಲೆಯ ವಲ್ಲಿಕುನ್ನಂ ಪೊಲೀಸ್ ಠಾಣೆಯ ಸಿಪಿಓ (Civil Police Officer) ಆಗಿದ್ದರು. ಆರೋಪಿ ಅಜಾಝ್ ಅಲುವಾ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ. ಆದರೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ.
Advertisement
Advertisement
ಆಗಿದ್ದೇನು?:
ಸೌಮ್ಯಾ ಅವರು ಕೆಲಸ ಮುಗಿಸಿ ಬೈಕ್‍ನಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಮನೆಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಅಜಾಝ್ ಸೌಮ್ಯಾ ಅವರ ಬೈಕ್‍ಗೆ ಗುದ್ದಿ ಕೆಳಗೆ ಬೀಳಿಸಿದ್ದಾನೆ. ಅಜಾಝ್ ವರ್ತನೆ ಕೊಲೆ ಮಾಡಲು ಬಂದಿದ್ದಾನೆ ಎಂದು ಅರಿತ ಸೌಮ್ಯಾ ಓಡಲು ಆರಂಭಿಸಿದ್ದಾರೆ. ತಕ್ಷಣವೇ ಹಿಂಬಾಲಿಸಿದ ಆರೋಪಿ, ಚಾಕುನಿಂದ ಇರಿದು, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಾ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಘಟನೆಯಲ್ಲಿ ಅಜಾಝ್‍ಗೂ ಬೆಂಕಿ ತಗುಲಿದ್ದು, ಆತನ ದೇಹದ ಮೇಲೆ ಶೇ. 50 ರಷ್ಟು ಸುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಆರೋಪಿಯನ್ನು ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸೌಮ್ಯಾ ಅವರು ಪತಿ ಸಂಜೀವ್, ಮೂವರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತದೆ ಎಂದು ಅಲಪ್ಪುಳ ಜಿಲ್ಲಾ ಪೊಲೀಸ್ ಮುಖ್ಯಸ್ಥ ಕೆ.ಎಂ.ಟಾಮಿ ತಿಳಿಸಿದ್ದಾರೆ.