LatestMain PostNational

ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಮೊದಲ ಬಲಿ – ಸ್ಥಳದಲ್ಲಿಯೇ ಮಹಿಳೆ ಸಾವು

ಗಾಂಧೀನಗರ: ಗುಜರಾತ್‍ನ (Gujarat) ಆನಂದ್ (Anand) ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ (Beatrice Archibald Peter) ಎಂದು ಗುರುತಿಸಲಾಗಿದ್ದು, ಆನಂದ್ ರೈಲ್ವೆ ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ಸಂಜೆ 4.37ಕ್ಕೆ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದಕ್ಕೆ ಹೆತ್ತತಾಯಿಯಿಂದಲೇ ಮಗುವಿನ ಕೊಲೆ

ಅಹಮದಾಬಾದ್‍ನ (Ahmedabad) ನಿವಾಸಿಯಾಗಿರುವ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಅವರು, ಆನಂದ್‍ನಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಆನಂದ್ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ಪ್ರೆಸ್ ಮಹಿಳೆ ಮೇಲೆ ಹರಿದಿದೆ. ರೈಲು ಗಾಂಧಿನಗರದಿಂದ ಮುಂಬೈ ಸೆಂಟ್ರಲ್‍ಗೆ ತೆರಳುತ್ತಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆನಂದ್ ನಿಲ್ದಾಣದಲ್ಲಿ ನಿಲ್ಲಿಸುವುದಿಲ್ಲ. ಇದನ್ನೂ ಓದಿ: ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣ: ಶಾಮನೂರು ಶಿವಶಂಕರಪ್ಪ

ಸೆಪ್ಟೆಂಬರ್ 30 ರಂದು ಗಾಂಧೀನಗರ ರಾಜಧಾನಿ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಆದರೆ ಅಂದಿನಿಂದ ವಂದೇ ಭಾರತ್ ರೈಲು ಹಲವು ಬಾರಿ ಅಪಘಾತದ ವಿಚಾರಕ್ಕೆ ಸುದ್ದಿ ಮಾಡಿದೆ. ಕಳೆದ ಅಕ್ಟೋಬರ್ ತಿಂಗಳೊಂದರಲ್ಲಿಯೇ ಮೂರು ಬಾರಿ ವಂದೇ ಭಾರತ್ ರೈಲು ಜಾನುವಾರುಗಳಿಗೆ ಡಿಕ್ಕಿ ಹೊಡೆದಿರುವ ಘಟನೆಗಳು ವರದಿಯಾಗಿವೆ.

Live Tv

Leave a Reply

Your email address will not be published. Required fields are marked *

Back to top button