Connect with us

Latest

ರಂಜಾನ್ ಹಬ್ಬದಂದು ಉಗ್ರರಿಂದ ಗುಂಡಿಕ್ಕಿ ಮಹಿಳೆಯ ಹತ್ಯೆ

Published

on

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಉಗ್ರರು ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಈ ಘಟನೆಯಲ್ಲಿ ನಾಗರಿಕ ಮೊಹಮ್ಮದ್ ಸುಲ್ತಾನ್ ಗಾಯಗೊಂಡಿದ್ದು, ಮಹಿಳೆ ನಗೀನಾ ಬಾನೋ ಮೃತಪಟ್ಟಿದ್ದಾರೆ ಎಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ. ಈ ಘಟನೆಯಲ್ಲಿ ಗಾಯಗೊಂಡ ಸುಲ್ತಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಗ್ರರು ನಗೀನಾ ಬಾನೋ ಮನೆಯೊಳಗೆ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಉಗ್ರರು ಮಹಿಳೆ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ನಾವು ಸ್ಥಳಕ್ಕೆ ತಲುಪಿ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಂಜಾನ್ ಹಬ್ಬದಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆದಿದ್ದು, ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ವೇಳೆ ಕಿಡಿಗೇಡಿಗಳು ಬೆಳ್ಳಂಬೆಳಗ್ಗೆ ಕಲ್ಲು ತೂರಾಟ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *