ರಾಯಚೂರು: ಅನುಚಿತ ವರ್ತನೆ ತೋರಿದ ಯುವಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು (Lingasuguru) ಪಟ್ಟಣದ ಬಸ್ ನಿಲ್ದಾಣದಲ್ಲಿ (Bus Stand) ನಡೆದಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಜೊತೆಗೆ ಅಶ್ಲೀಲವಾಗಿ ಮಾತಾಡಿದ್ದಾನೆ. ಇದರಿಂದ ಸಹನೆ ಕಳೆದುಕೊಂಡು ಮಹಿಳೆ ಯುವಕನ ವರ್ತನೆ ಸಹಿಸಲಾಗದೇ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಇದನ್ನೂ ಓದಿ: ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ – ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ
ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
