LatestMain PostNational

ನಡುರಸ್ತೆಯಲ್ಲಿ ಮಹಿಳೆ ಬಟ್ಟೆ ಬಿಚ್ಚಿ ರಾಡ್‍ನಿಂದ ಹಲ್ಲೆ – ನಾಲ್ವರು ಅರೆಸ್ಟ್

ಭೋಪಾಲ್: ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಜಬುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಎಲ್ಲರೂ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಕೂಲಿ ಕಾರ್ಮಿಕರಾಗಿದ್ದಾರೆ. ಸಂತ್ರಸ್ತೆ ರೂಪರೇಲ್ ಗ್ರಾಮದ ನಿವಾಸಿಯಾಗಿದ್ದು, ಕೆಲವು ತಿಂಗಳ ಹಿಂದೆ ಪತಿಯನ್ನು ತೊರೆದು ಬೇರೊಬ್ಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು. ಇದನ್ನೂ ಓದಿ: ಬೈಕ್, ರಿಕ್ಷಾಗೆ ಗುದ್ದಿದ ಕಾರ್ – 6 ಜನರ ಸಾವಿಗೆ ಕಾರಣವಾದ ಕಾಂಗ್ರೆಸ್ ಶಾಸಕನ ಅಳಿಯ

ಬುಧವಾರ ಮತ್ತೆ ಮಹಿಳೆ ತನ್ನ ಗಂಡನ ಮನೆಗೆ ಹೋದಳು. ಇದರಿಂದ ಕೋಪಗೊಂಡ ಆಕೆಯೊಂದಿಗೆ ವಾಸವಿದ್ದ ಮುಖೇಶ್ ತನ್ನೊಂದಿಗೆ ಇತರರನ್ನು ಕರೆದುಕೊಂಡು ಗ್ರಾಮಕ್ಕೆ ಹೋಗಿ ಮಹಿಳೆ ಮತ್ತು ಆಕೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ

ಘಟನೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೀಡಿಯೊದಲ್ಲಿ ಹಾಡಹಗಲೇ ವ್ಯಕ್ತಿಗಳು ಗ್ಯಾಂಗ್ ಮಹಿಳೆಯ ಬಟ್ಟೆ ಬಿಚ್ಚಿ ರಸ್ತೆಯಲ್ಲಿಯೇ ರಾಡ್‍ನಿಂದ ಹೊಡೆಯುತ್ತಿದ್ದರೆ, ಮತ್ತೆ ಕೆಲವರು ಮಧ್ಯಪ್ರವೇಶಿಸಿ ಮಹಿಳೆಯನ್ನು ರಕ್ಷಿಸಲು ಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ನಂತರ ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಚಿಕಿತ್ಸೆಗಾಗಿ ಪೆಟ್ಲವಾಡ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ತಿವಾರಿ ಅವರು, ಮುಖೇಶ್ ತನೆಗೆ ಕಿರುಕುಳ ನೀಡುತ್ತಿದ್ದರಿಂದ ಗಂಡನ ಮನೆಗೆ ಮರಳಿದ್ದಾಗಿ ಮಹಿಳೆ ಹೇಳಿದ್ದಾಳೆ. ಮಹಿಳೆಯನ್ನು ಆಕೆಯ ಪತಿ ಕೂಡ ಒಪ್ಪಿಕೊಂಡಿದ್ದರಿಂದ ಮುಖೇಶ್ ಗಲಾಟೆ ಮಾಡಲು ಆರಂಭಿಸಿದ್ದಾನೆ. ನಂತರ ಮಹಿಳೆಯ ಬಟ್ಟೆಯನ್ನು ಬಿಚ್ಚಿ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ್ದಾನೆ. ಇದೀಗ ಈ ಸಂಬಂಧ ಐವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button