Crime
ಎಸ್ಐ ಸೂಸೈಡ್ ಪ್ರಕರಣಕ್ಕೆ ಟ್ವಿಸ್ಟ್ – ಡೆತ್ ನೋಟ್ ನಲ್ಲಿ ಏನಿದೆ?

– ಮೊಬೈಲ್ ನಲ್ಲಿದೆ ಆತ್ಮಹತ್ಯೆಯ ರಹಸ್ಯ
ಲಕ್ನೋ: ಉತ್ತರ ಪ್ರದೇಶದ ಬುಲಂದ್ಶಹರ್ ನಲ್ಲಿ 30 ವರ್ಷ ಮಹಿಳಾ ಸಬ್ ಇನ್ಸ್ಪೆಕ್ಟರ್ ಆರ್ಜೂ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಲಭ್ಯವಾಗಿರುವ ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ತಾವೇ ಕಾರಣ ಎಂದು ಬರೆದುಕೊಂಡಿದ್ದಾರೆ.
ಆರ್ಜೂ ಶುಕ್ರವಾರ ರಾತ್ರಿ ವಾಸವಿದ್ದ ಬಾಡಿಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಶನಿವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸಂಜೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಶವವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಆರ್ಜೂ ಅವರ ಮನೆಯಲ್ಲಿ ಸೂಸೈಡರ್ ನೋಟ್ ಲಭ್ಯವಾಗಿದ್ದು, ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆಯಲಾಗಿದೆ. ಹೊಸ ವರ್ಷದ ರಾತ್ರಿ ಸಿಬ್ಬಂದಿ ಜೊತೆ ರೆಸ್ಟೋರೆಂಟ್ ಊಟ ಮಾಡಿ ನ್ಯೂ ಇಯರ್ ಆಚರಣೆ ಮಾಡಿದ್ದರು. ಆರ್ಜೂ ಅವರಿಗೆ ಮದುವೆ ಬಗ್ಗೆ ಮಾತುಕತೆ ನಡೆಯುತ್ತಿತ್ತು. ಮದುವೆ ಆಗುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಸದ್ಯ ಆರ್ಜೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್ಜೂ ಅವರು ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಮೊಬೈಲ್ ಲಾಕ್ ಆದ ಹಿನ್ನೆಲೆ ಫೋರೆನಿಕ್ಸ್ ಲ್ಯಾಬ್ ಗೆ ಕಳುಹಿಸಲಾಗಿದೆ.
ಆರ್ಜೂ ಮೂಲತಃ ಶಾಮಿಲಿ ಜಿಲ್ಲೆಯವರಾಗಿದ್ದು, 2015ರಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು. ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
