– ಚುನಾವಣೆಯ ಹೊತ್ತಲ್ಲೇ ಬರ್ಬರ ಹತ್ಯೆ
– ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ
ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.
ಪ್ರೀತಿ ಅಹ್ಲಾವತ್ ಕೊಲೆಯಾದ ಎಸ್‍ಐ. ನಗರದ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರೀತಿ ಅವರನ್ನು ಪೋಸ್ಟ್ ಮಾಡಲಾಗಿತ್ತು. ರಾತ್ರಿ ಸುಮಾರು 9.30ಕ್ಕೆ ಈ ಘಟನೆ ಬಗ್ಗೆ ನಮಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Delhi: A Sub-Inspector of Delhi Police – Preeti, posted in Patparganj Industrial Area Police Station, was found dead with multiple bullet injuries in Rohini area, earlier tonight. Forensic team and Police are present at the spot. pic.twitter.com/1tRejhCpjV
— ANI (@ANI) February 7, 2020
Advertisement
ನಮಗೆ ಕರೆ ಬರುತ್ತಿದ್ದಂತೆ ನಾವು ಸ್ಥಳಕ್ಕೆ ಭೇಟಿ ನೀಡಿದ್ದೆವು. ಈ ವೇಳೆ ಪ್ರೀತಿ ಅವರ ತಲೆಗೆ ಗುಂಡೇಟು ಗಾಯಗಳಾಗಿದೆ. ನಾವು ಶಂಕಿತರನ್ನು ಗುರುತಿಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಡಿ ಮಿಶ್ರಾ ಹೇಳಿದ್ದಾರೆ.
Advertisement
ಘಟನೆ ನಡೆದ ಸ್ಥಳದಲ್ಲಿ ಮೂರು ಖಾಲಿ ಕಾರ್ಟ್ರಿಡ್ಜ್ ಗಳು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ. ವೈಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
ಇತ್ತ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಇದೇ ಹೊತ್ತಲ್ಲಿ ದುಷ್ಕರ್ಮಿಗಳು ಮಹಿಳಾ ಎಸ್‍ಐನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ ಆಗಿದ್ದು, ಇಡೀ ರಾಜಧಾನಿಯೇ ಬೆಚ್ಚಿಬಿದ್ದಿದೆ.