ಹೈದರಾಬಾದ್: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು 10 ಆಸ್ಪತ್ರೆಗಳಿಗೆ ಅಲೆದಾಡಿ ಕೊನೆಗೆ ಪ್ರಾಣ ಬಿಟ್ಟ ಅಮಾನವೀಯ ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ಹೌದು. ಮೃತ ಮಹಿಳೆಯನ್ನು ರಫೀಯಾ ಬೇಗಂ(22) ಎಂದು ಗುರುತಿಸಲಾಗಿದ್ದು, ಇವರು ಏಪ್ರಿಲ್ 2ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಅವರು ಶ್ವಾಸಕೋಶದ ತೊಂದರೆಯಿಂದ ಬಳಲಿದ್ದು, ಏಪ್ರಿಲ್ 8ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
Advertisement
Advertisement
ಅನಾರೋಗ್ಯಕ್ಕೀಡಾದ ಬಳಿಕ ಮಹಿಳೆಯ ಪತಿ 10 ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಭಯದಿಂದ ಎಲ್ಲಾ ಆಸ್ಪತ್ರೆಯವರೂ ಮಹಿಳೆಯನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಕೊನೆಗೆ ಅಂದರೆ ಏಪ್ರಿಲ್ 8ರಂದು ಸಂಜೆ ಮಹಿಳೆ ಕೊನೆಯುಸಿರೆಳೆದಿದ್ದಾರೆ.
Advertisement
ಮೃತರಾದ ನಂತರ ಕೋವಿಡ್ 19 ಟೆಸ್ಟ್ ಕೂಡ ಮಾಡಲಾಗಿದ್ದು, ಅದರಲ್ಲಿ ನೆಗೆಟಿವ್ ಅಂತ ವರದಿ ಬಂದಿದೆ. ಬಳಿಕ ಅಧಿಕಾರಿಗಳು 9 ದಿನದ ಮಗು, ಪತಿ ಹಾಗೂ ಆಕೆಯ ಕುಟುಂಬಸ್ಥರನ್ನು ರಾಜೇಂದ್ರ ನಗರದಲ್ಲಿರುವ ಕ್ವಾರಂಟೈನ್ ಸೆಂಟರ್ ನಲ್ಲಿ ಗೃಹಬಂಧನದಲ್ಲಿರಿಸಿದ್ದಾರೆ.
Advertisement
ಮೃತರ ಪತಿ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಅಲ್ಲದೆ ಯಾವುದೇ ಕೋವಿಡ್ 19 ಪಾಸಿಟಿವ್ ವ್ಯಕ್ತಿಯ ಜೊತೆ ಸಂಪರ್ಕ ಕೂಡ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಕೆಲ ಆಸ್ಪತ್ರೆಯ ವೈದ್ಯರು, ಮಹಿಳೆ ಕೊರೊನಾ ವೈರಸ್ ವ್ಯಕ್ತಿಯ ಸಂಪರ್ಕದಲ್ಲಿದ್ದರು. ಹೀಗಾಗಿ ಅವರಿಗೆ ಕಫ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.