ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬ(Sorab) ತಾಲೂಕಿನ ಶಿವಪುರದಲ್ಲಿ ನಡೆದಿದೆ.
ನೇಣಿಗೆ ಶರಣಾದ ಮಹಿಳೆಯನ್ನು ಶೈಲಜಾ (28) ಎಂದು ಗುರುತಿಸಲಾಗಿದೆ. ಮೃತಳ ಪತಿ (Husband) ಹಾಗೂ ಅತ್ತೆ ಮಹಿಳೆಗೆ ಹೊಡೆದು ಹತ್ಯೆಗೈದು ನೇಣು ಬಿಗಿದಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಪ್ರಕರಣದ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅಲ್ಲದೇ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಸೊರಬ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.