ಸಾಂದರ್ಭಿಕ ಚಿತ್ರ
ಬೆಂಗಳೂರು: ರಸ್ತೆ ಮಧ್ಯದಲ್ಲೆ ಕಾರ್ ಪಾರ್ಕ್ ಮಾಡಿಕೊಂಡು ಟ್ರಾಫಿಕ್ ಜಾಮ್ ಉಂಟು ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಟೆಕ್ಕಿ ಕೆನ್ನೆಗೆ ಹೊಡೆದು ಆಕೆಯ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Advertisement
ಈ ಘಟನೆ ಅಕ್ಟೋಬರ್ 5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯ ಮಗ ಮಂಜುನಾಥ್(29) ಮತ್ತು ಆತನ ಸ್ನೇಹಿತ ಮಧು (31) ಸೇರಿಕೊಂಡು 25 ವರ್ಷದ ಟೆಕ್ಕಿ ಮಹಿಳೆಗೆ ಟ್ರಾಫಿಕ್ ಪೊಲೀಸರ ಮುಂದೆಯೇ ಕೆನ್ನೆಗೆ ಹೊಡೆದಿದ್ದಾರೆ.
Advertisement
ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕೊಂಡ್ರಹಳ್ಳಿಯ ರಸ್ತೆಯ ಮಧ್ಯದಲ್ಲಿ ಮಂಜುನಾಥ್ ತಮ್ಮ ಜ್ಹೆನ್ ಕಾರ್ ನ್ನು ನಿಲ್ಲಿಸಿದ್ದರು. ಇದನ್ನು ಮಹಿಳೆ ಪ್ರಶ್ನಿಸಿದ್ದಾರೆ. ಈ ವೇಳೆ ಮಂಜುನಾಥ್ ಮತ್ತು ಆತನ ಸ್ನೇಹಿತ ಸೇರಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಆಕೆಯ ಬಟ್ಟೆಯನ್ನು ಹರಿದು ಹಾಕಿ ದರ್ಪ ಮೆರೆದಿದ್ದಾರೆ.
Advertisement
ಈ ಸಂಬಂಧ ಹಲ್ಲೆಗೊಳಗಾದ ಮಹಿಳಾ ಟೆಕ್ಕಿ ಬೆಳ್ಳೂಂದುರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲೈಂಗಿಕ ಕಿರುಕುಳದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಉನ್ನತಾಧಿಕಾರಿ ಮಗ ಮಂಜುನಾಥ್ ಮತ್ತು ಆತನ ಸ್ನೇಹಿತ ಮಧುವನ್ನು ಬಂಧಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews