ಚೆನ್ನೈ: ಅನ್ಯ ಜಾತಿಯ ಹುಡುಗಿಯೊಂದಿಗೆ ಮಗ ಓಡಿಹೋಗಿದ್ದಕ್ಕೆ ಆತನ 45 ವರ್ಷದ ತಾಯಿಯನ್ನು ಲೈಟ್ ಕಂಬಕ್ಕೆ ಕಟ್ಟಿ ಗ್ಯಾಂಗ್‍ವೊಂದು ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ ಬ್ಲಾಕ್‍ನ ಕೆ.ವಾಗೈಕುಲಂ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಆಕೆಯನ್ನು ಅರುಪ್ಪುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಡುಗಿಯ ತಾಯಿ ಸೇರಿದಂತೆ 14 ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಮೀನಾಕ್ಷಿ ತಾಯಿ ದೂರು ನೀಡಿದ್ದು, ಈ ದೂರಿನ್ವಯ ಪರಾಳಚಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿ 22ರಂದು ಮೀನಾಕ್ಷಿ ಅವರ ಮಗ ಅದೇ ಗ್ರಾಮದ ಬೇರೆ ಜಾತಿ ಹುಡುಗಿಯೊಂದಿಗೆ ಓಡಿಹೋಗಿ, ಇಬ್ಬರು ವಿವಾಹವಾಗಿದ್ದಾರೆ. ಅಲ್ಲದೇ ಆಶ್ರಯ ಕೋರಿ ಅರುಪ್ಪುಕೊಟ್ಟೈ ಎಲ್ಲಾ ಮಹಿಳಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ. ಇದನ್ನೂ ಓದಿ: ಮಗಳ ದಾಂಪತ್ಯ ಸರಿಪಡಿಸಲು ರಜನಿಕಾಂತ್ ಸರ್ಕಸ್
ಇದಾದ ಮೂರು ದಿನಗಳ ನಂತರ ಅಂದರೆ ಜನವರಿ 25 ರಂದು ಹುಡುಗಿಯ ಸಂಬಂಧಿಕರು ಮತ್ತು ಇತರರು ಮೀನಾಕ್ಷಿ ಅವರ ಮನೆಗೆ ನುಗ್ಗಿ ಅವಳನ್ನು ಹೊರಗೆಳೆದು, ಲೈಟ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ