ಪಣಜಿ: ಪ್ಯಾರಾಗ್ಲೈಡಿಂಗ್ (Paragliding) ಅಂದ್ರೆ ಯಾರಿಗೆ ತಾನೆ ಇಷ್ಟ ಇರಲ್ಲ ಹೇಳಿ. ಪ್ರತಿಯೊಬ್ಬರ ಕನಸು, ಪ್ಯಾರಾಗ್ಲೈಡಿಂಗ್ ಸಮಯದಲ್ಲಿ ಅನೇಕ ಬಾರಿ ಅಪಘಾತಗಳು ಸಂಭವಿಸಿವೆ. ಇಂತಹ ಘಟನೆಯೊಂದು ಉತ್ತರ ಗೋವಾದಲ್ಲಿ (North Goa) ನಡೆದಿದೆ.
ಪ್ಯಾರಾಗ್ಲೈಡಿಂಗ್ ವೇಳೆ ನಿರ್ಲಕ್ಷ್ಯದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ, ಪ್ಯಾರಾಗ್ಲೈಡಿಂಗ್ ಮಹಿಳಾ ಪ್ರವಾಸಿ ಹಾಗೂ ಇನ್‌ಸ್ಟ್ರಕ್ಟರ್ ಸಾವಗೀಡಾಗಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Advertisement
Advertisement
ಅಪಘಾತದಲ್ಲಿ ಪುಣೆ ನಿವಾಸಿ ಶಿವಾನಿ ಮತ್ತು ಆಕೆಯ ಇನ್‌ಸ್ಟ್ರಕ್ಟರ್ ಸುಮಲ್ ನೇಪಾಲಿ ಸಾವನ್ನಪ್ಪಿದ್ದಾರೆ. ಇನ್ನು, ಪ್ಯಾರಾಗ್ಲೈಡಿಂಗ್ ಸಂಸ್ಥೆಯ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: 2 ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ
Advertisement
ದೂರಿನನ್ವಯ ‘ಪ್ಯಾರಾಗ್ಲೈಡರ್’ ಟೇಕಾಫ್ ಆದ ತಕ್ಷಣ ಕಂದಕಕ್ಕೆ ಬಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಂಪನಿ ಮಾಲೀಕ ಶೇಖರ್ ವಿರುದ್ಧ ಮಾಂಡ್ರೆಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾಗ ಸಾಧುಗಳು ಯಾರು? ನೇಮಕಾತಿ ಹೇಗೆ ನಡೆಯುತ್ತೆ? ದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?