ಲಕ್ನೋ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಎಸ್‍ಪಿ ಕಚೇರಿ ಬಳಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡಿದ್ದಾರೆ.
ಸುಟ್ಟ ಗಾಯಗಳಾಗಿದ್ದ ಮಹಿಳೆಯನ್ನು ಕಾನ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದು, ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕಾನ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಸ್ಥಳೀಯರು ಧಾವಿಸಿದ್ದಾರೆ. ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಸುಮಾರು ಶೇ.60-70ರಷ್ಟು ಸುಟ್ಟ ಗಾಯಗಳಾಗಿವೆ.
Advertisement
Advertisement
ಪ್ರಕರಣದ ಕುರಿತು ಎಸ್‍ಪಿ ವಿಕ್ರಾಂತ್ ವೀರ್ ಪ್ರತಿಕ್ರಿಯಿಸಿ, ಅಕ್ಟೋಬರ್ 2ರಂದು ಮಹಿಳೆ ವ್ಯಕ್ತಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದರು. ಕಳೆದ 10 ವರ್ಷಗಳಿಂದ ಮಹಿಳೆ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ವ್ಯಕ್ತಿ ಸಂತ್ರಸ್ತೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ಮಹಿಳೆಯು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಆದರೆ ನಾವು ಬಂಧನ ಮಾಡುವಷ್ಟರಲ್ಲಿ ಆರೋಪಿಯು ಹೈಕೋರ್ಟ್‍ನಿಂದ ಆಗಲೇ ನಿರೀಕ್ಷಣಾ ಜಾಮೀನು ಪಡೆದಿದ್ದ ಎಂದು ವಿವರಿಸಿದ್ದಾರೆ.
Advertisement
ಪ್ರಕರಣದ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳೆಯು ಕೆಲ ದಿನಗಳಿಂದ ಪೊಲೀಸ್ ಠಾಣೆಗೆ ಆಗಮಿಸುತ್ತಿದ್ದಳು. ಮಹಿಳೆ ಹಸಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಳ್ಳಿಯವಳು ಎಂದು ವರದಿಯಲ್ಲಿ ತಿಳಿಸಲಾಗಿದೆ.