ಲಕ್ನೋ: ಭಾನುವಾರ ಬೆಳಗಿನ ಜಾವ ಮಲವಿಸರ್ಜನೆಗೆಂದು ತೆರಳಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾಸ್‍ಗಂಜ್ (Kasganj) ಜಿಲ್ಲೆಯಲ್ಲಿ ನಡೆದಿದೆ.
ಎಷ್ಟು ಹೊತ್ತಾದರೂ ಮನೆಗೆ ಪತ್ನಿ ಮನೆಗೆ ಬಾರದೇ ಇದ್ದಿದ್ದನ್ನು ಗಮನಿಸಿದ ಪತಿ ಹಾಗೂ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ಆರಂಭಿಸಿದರು. ಈ ವೇಳೆ ಮಹಿಳೆಯ ಶವ ನೀರು ತುಂಬಿದ್ದ ಗುಂಡಿಯೊಳಗೆ ಬಿದ್ದಿರುವುದು ಕಂಡು ಬಂದಿದೆ. ಇದನ್ನೂ ಓದಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‍ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
Advertisement
Advertisement
ನಂತರ ಮೃತ ಮಹಿಳೆಯ ಪತಿ ರಿಷಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸಲು ಆರಂಭಿಸಿದರು. ಪ್ರಕರಣ ಸಂಬಂಧ ಸಾಕ್ಷಿಗಳನ್ನು ಪತ್ತೆ ಹಚ್ಚಲು ಶ್ವಾನ ದಳವನ್ನು ಕರೆಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಸರ್ವವ್ಯಾಪಿ, ಸರ್ವ ಸ್ಪರ್ಶಿಯಾಗಿದೆ: ಪ್ರಿಯಾಂಕ್ ಖರ್ಗೆ
Advertisement
Advertisement
ನಂತರ ಮೃತದೇಹವನ್ನು ನೋಡಿದ ಪೊಲೀಸರು, ಮಹಿಳೆಯನ್ನು ದುಪ್ಪಾಟ್ಟಾದಿಂದ ಕತ್ತು ಹಿಸುಕಿ ಸಾಯಿಸಿದ್ದಾರೆ. ನಂತರ ಶವವನ್ನು ನೀರು ತುಂಬಿದ ಗುಂಡಿಗೆ ಎಸೆದಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ಮುಗಿದ ನಂತರವೇ ಸತ್ಯ ಸಂಗತಿ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ. ಇದೀಗ ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.