ಭೋಪಾಲ್: ಮಹಿಳೆಯೊಬ್ಬಳನ್ನು ಹತ್ಯೆಗೈದು ಎರಡು ಚೀಲಗಳಲ್ಲಿ ತುಂಬಿ ರೈಲಿನಲ್ಲಿ ಇಟ್ಟು ಹೋದ ಪ್ರಕರಣ ಮಧ್ಯಪ್ರದೇಶದ (Madhya Pradesh) ಇಂದೋರ್ (Indore) ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಒಂದು ಅಥವಾ ಎರಡು ದಿನಗಳ ಹಿಂದೆ ಮಹಿಳೆಯನ್ನು ಬೇರೆ ಸ್ಥಳದಲ್ಲಿ ಕೊಲೆ ಮಾಡಲಾಗಿದೆ. ಬಳಿಕ ಶವವನ್ನು ಕತ್ತರಿಸಿ ಬ್ಯಾಗ್‍ನಲ್ಲಿ ತುಂಬಿ ಶನಿವಾರ ರಾತ್ರಿ ರೈಲಿನಲ್ಲಿ ತಂದು ಇರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚೀಲದಲ್ಲಿ ಮಹಿಳೆಯ ಕೈ ಹಾಗೂ ಕಾಲುಗಳು ಪತ್ತೆಯಾಗಿಲ್ಲ. ಚೀಲಗಳನ್ನು ವಶಕ್ಕೆ ಪಡೆದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ
ರೈಲಿನ ಸ್ವಚ್ಛತಾ ಸಿಬ್ಬಂದಿ ಬೋಗಿಯ ಒಳಗೆ ಸ್ವಚ್ಛಗೊಳಿಸುತ್ತಿದ್ದಾಗ ಎರಡು ಬ್ಯಾಗ್‍ಗಳು ಪತ್ತೆಯಾಗಿವೆ. ಈ ಮಾಹಿತಿಯನ್ನು ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರು ಬ್ಯಾಗ್ ಪರಿಶೀಲನೆ ಮಾಡಿದಾಗ ಮಹಿಳೆಯ ಮೃತದೇಹ ತುಂಡು ತುಂಡಾಗಿ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹತ್ಯೆಯಾದ ಮಹಿಳೆ ಸುಮಾರು 20 ರಿಂದ 25 ವರ್ಷ ವಯಸ್ಸಿನವಳೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಗುರುತು ಪತ್ತೆಗೆ ಪ್ರಯತ್ನಗಳು ನಡೆಯುತ್ತಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಮಂತ್ರಿ ಸ್ಥಾನ ಇಲ್ಲ: ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಮುಂದುವರಿಕೆ