ತಿರುವನಂತಪುರಂ: ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವಳನ್ನು ಮಾನ್ಯ(22) ಎಂದು ಗುರುತಿಸಲಾಗಿದೆ. ಈಕೆ ತ್ರಿಕಲಯೂರ್ ಮನೆಯ ಬೆಡ್‍ರೂಂನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸದ್ಯ ಈಕೆಯನ್ನು ಮದುವೆಯಾಗಬೇಕಾಗಿದ್ದ ಯುವಕ ಅಶ್ವಿನ್(26) ವಿರುದ್ಧ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಮಾನ್ಯ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆಯೇ ಆಕೆಯ ಕುಟುಂಬಸ್ಥರು ಕೆಲವೊಂದು ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ಮಾನ್ಯ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿವೆ. ಹೀಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಆರೋಪದಂತೆ ಅರೆಕೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಮಾನ್ಯ ಕುಟುಂಬಸ್ಥರು ಆರೋಪ ಮಾಡಿದ ಬೆನ್ನಲ್ಲೇ ತನಿಖೆ ನಡೆಸಿದ ಪೊಲೀಸರಿಗೆ ಅಶ್ವಿನ್ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ‘ಕಾಳಿ’ಗೆ ಅವಮಾನ ಮಾಡಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ಕೋರ್ಟ್ ಸಮನ್ಸ್
ಕಳೆದ 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾನ್ಯ ಹಾಗೂ ಅಶ್ವಿನ್ ನಿಶ್ಚಿತಾರ್ಥ ನಡೆದಿದ್ದು, ಈ ಮೂದಲೇ ಇಬ್ಬರು ಪ್ರೀತಿಯಲ್ಲಿದ್ದರು. ಅಂದರೆ ಕಳೆದ 8 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದರು. ಇತ್ತ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ಅಶ್ವಿನ್, ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮಾನ್ಯ ಜೊತೆಗಿನ ಸಂಬಂಧ ಕಡಿದುಕೊಂಡಿದ್ದನು. ಅಂತೆಯೇ ಇದೀಗ ಮದುವೆಯಿಂದ ಕೂಡ ದೂರ ಉಳಿಯುವ ಅಶ್ವಿನ್ ನಿರ್ಧಾರದಿಂದ ಮಾನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಮಾನ್ಯ ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ ವಾಯ್ಸ್ ಮೆಸೇಜ್ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. ವಿದೇಶದಿಂದ ಅಶ್ವಿನ್ ತವರಿಗೆ ಮರಳುತ್ತಿದ್ದಂತೆಯೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.