ಮುಂಬೈ: ಮಹಿಳಾ ವಕೀಲರು ಮುಕ್ತ ನ್ಯಾಯಾಲಯದಲ್ಲಿ (Open Court) ತಮ್ಮ ತಲೆಗೂದಲನ್ನು ಪದೇಪದೆ ಸರಿಪಡಿಸಿಕೊಳ್ಳದಿರಿ. ಇದರಿಂದ ನ್ಯಾಯಾಲಯದ (Court) ಕಲಾಪಕ್ಕೆ ತೊಂದರೆಯಾಗುತ್ತದೆ ಎಂಬ ವಿಲಕ್ಷಣ ಪ್ರಕಟಣೆಯೊಂದನ್ನು ಪುಣೆ ಜಿಲ್ಲಾ ನ್ಯಾಯಾಲಯ (Pune District Court) ಹೊರಡಿಸಿತ್ತು.
Wow now look ! Who is distracted by women advocates and why ! pic.twitter.com/XTT4iIcCbx
— Indira Jaising (@IJaising) October 23, 2022
Advertisement
ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಾದಾತ್ಮಕ ಪ್ರಕಟಣೆಯನ್ನು ಹಿಂಪಡೆದಿದೆ. ಮಹಿಳಾ ವಕೀಲರು (Women Advocates) ಓಪನ್ ಕೋರ್ಟ್‌ನಲ್ಲಿ ಪದೇಪದೆ ತಮ್ಮ ತಲೆಗೂದಲು ಸರಿಪಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಇದು ನ್ಯಾಯಾಲಯದ ಕಾರ್ಯನಿರ್ವಹಣೆಗೆ ತೊಂದರೆ ಉಂಟುಮಾಡುತ್ತಿದೆ. ಆದ್ದರಿಂದ ಹಾಗೆ ಮಾಡದಿರಲು ಮಹಿಳಾ ವಕೀಲರಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿತ್ತು. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು
Advertisement
Advertisement
ನ್ಯಾಯಾಲಯದ ಸೌಹಾರ್ದತೆಯನ್ನು ಕಾಪಾಡಲು ಮಾತ್ರ ನೋಟಿಸ್ ನೀಡಲಾಗಿದೆಯೇ ಹೊರತು ಯಾರನ್ನೂ ನೋಯಿಸಲು ಮಾಡಿಲ್ಲ. ಕೆಲವರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ನೋಟಿಸ್ ಹಿಂಪಡೆದಿರುವುದಾಗಿ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಅವರಿಗೆ ಗಂಡೆದೆ ಇದೆ – ಆರ್.ಅಶೋಕ್
Advertisement
ಪ್ರಕಟಣೆ ಕುರಿತು ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ `ವಾವ್, ಈಗ ಇಲ್ಲಿ ನೋಡಿ, ಮಹಿಳಾ ವಕೀಲರಿಂದ ಯಾರು ವಿಚಲಿತರಾಗಿದ್ದಾರೆ’ ಎಂದು ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.