ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು (Smriti Irani) ದೆಹಲಿಯಲ್ಲಿ (Delhi) ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೇ ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಈ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದ ಅವರು ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ
Advertisement
Advertisement
ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ, ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಬೇಕು ಎಂದು ಮನವಿ ಮಾಡಿದರು. ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಕೃತಿ ಇರಾನಿ, ತಕ್ಷಣ ಈ ಬಗ್ಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದ್ದಾರೆ.
Advertisement
Advertisement
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು; 2-3 ದಿನದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ: ಸಿದ್ದರಾಮಯ್ಯ