ಶಿವಮೊಗ್ಗ: ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ನಗರದ ಮಿಳಘಟ್ಟ ಬಡಾವಣೆಯಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ಸಂಗೀತ (21) ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷದ ಹಿಂದೆ ಮಿಳಘಟ್ಟದ ನಿವಾಸಿ ಗುರುಮೂರ್ತಿ ಜೊತೆ ಸಂಗೀತ ವಿವಾಹವಾಗಿತ್ತು. ವಿವಾಹವಾಗಿ ಎರಡು ವರ್ಷವಾದರೂ ಮಕ್ಕಳಾಗಿರಲಿಲ್ಲ ಎಂದು ಕೊರಗುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಕೊಲೆ ಆರೋಪ
ಆದರೆ ಸಂಗೀತ ಪತಿಯ ಸಹೋದರಿ ಇತ್ತೀಚೆಗೆ ವಿವಾಹವಾಗಿದ್ದರು. ಮದುವೆಯಾದ ಕೆಲವೇ ತಿಂಗಳಿಗೆ ಆಕೆ ಗರ್ಭಿಣಿಯಾಗಿದ್ದಳು. ಮದುವೆಯಾಗಿ ಎರಡು ವರ್ಷ ಕಳೆದರೂ ತನಗೆ ಮಕ್ಕಳಾಗಿರಲಿಲ್ಲ ಎಂಬ ಕೊರಗಿನಿಂದಲೇ ಕೊರಳಿಗೆ ಉರುಳು ಹಾಕಿಕೊಂಡಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ಮಹಿಳಾ ಆಟಗಾರ್ತಿಯ ಸ್ನಾನದ ವಿಡಿಯೋ ಸೆರೆ ಹಿಡಿದ ಮತ್ತೋರ್ವ ಆಟಗಾರ್ತಿ