ಬೆಂಗಳೂರು: ಬಿಎಂಟಿಸಿ (BMTC Bus) ಬಸ್‌ಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
25 ವಯಸ್ಸಿನ ಮೋನಿಕಾ ಮೃತ ಮಹಿಳೆ. ಬಿಎಂಟಿಸಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜೊತೆಗೆ ಮಹಿಳೆ ಬಸ್‌ನ ಬಲಭಾಗಕ್ಕೆ ಬಿದ್ದಿದ್ದಾರೆ. ಪರಿಣಾಮ ಎದುರುಗಡೆಯಿಂದ ಬರುತ್ತಿದ್ದ ಕಾರು ಬಸ್‌ಗೆ ಗುದ್ದಿ ರಸ್ತೆಯಲ್ಲಿ ಬಿದ್ದ ಮಹಿಳೆಯ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!
ಮೋನಿಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಕ್ಕೆ ಹೋಗುವಾಗ ಘಟನೆ ಸಂಭವಿಸಿದೆ. ಬಿಎಂಟಿಸಿ ಬಸ್ ಉಲ್ಲಾಳ ಉಪನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆ ಹೋಗುವಾಗ ಉಲ್ಲಾಳ ಕೆರೆಯ ಬಳಿ ಅಪಘಾತ ಸಂಭವಿಸಿದೆ.
ಸಿಂಗಲ್ ರೋಡ್‌ನಲ್ಲಿ ಆತುರವಾಗಿ ಬಂದ ಮಹಿಳೆ ಎದುರುಗಡೆಯಿಂದ ಬರುತ್ತಿದ್ದ ನಮ್ಮ ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆ ಮೇಲೆ ಬಿದ್ದಾಗ ಎದುರುಗಡೆ ಬರುತ್ತಿದ್ದ ಕಾರು ಹರಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಮ್ಮದೇನು ತಪ್ಪಿಲ್ಲ ಎಂದ ಚಾಲಕ ಸುರೇಶ್ ಹೇಳಿದ್ದಾರೆ. ಘಟನೆ ಸಂಬಂದ ಮೃತ ಮಹಿಳೆ ಮೋನಿಕಾ ಸಂಬಂಧಿಕರು ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಹಾಗೂ ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಂಗಳೂರು ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ – 6 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್