ನವದೆಹಲಿ: 15ನೇ ರಾಷ್ಟ್ರಪತಿಯಾಗಿ ಇಂದು ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಿದ್ದಾರೆ.
ಸೆಂಟ್ರಲ್ ಹಾಲ್‍ನಲ್ಲಿ ಮುರ್ಮು ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು.
Advertisement
????LIVE NOW????
The Swearing-in Ceremony of the President in Central Hall of Parliament
Watch on #PIB‘s
YouTube: https://t.co/zojSoH2h2G
Facebook: https://t.co/JY2Ffp9kSy https://t.co/MD8fNKQ7zJ
— PIB India (@PIB_India) July 25, 2022
Advertisement
ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ಮೋದಿ ಆದಿಯಾಗಿ ಸಚಿವರು ಸಂಸದರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ
Advertisement
ಅಧಿಕಾರ ಸ್ವೀಕರಿಸಿದ ನಂತರ ಭಾಷಣ ಮಾಡಿದ ಅವರು, ನಾನು ಹುಟ್ಟಿದಾಗ ದೇಶ ಸ್ವಾತಂತ್ರ್ಯ ಸಂಭ್ರಮದಲ್ಲಿತ್ತು. ಈಗ 75 ವರ್ಷದ ಸಂಭ್ರಮದಲ್ಲಿ ನಾನು ರಾಷ್ಟ್ರಪತಿಯಾಗುತ್ತಿದ್ದೇನೆ. ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕಾಗಿ ಕೆಲಸ ಮಾಡುವೆ. ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ ಎಂದು ಹೇಳಿದರು.
Advertisement
ಬಡವರು ಕನಸು ಕಾಣಬಹುದು, ಅದನ್ನು ನನಸು ಮಾಡಿಕೊಳ್ಳಬಹುದು. ನನ್ನ ಹಳ್ಳಿಯಲ್ಲಿ ಕಾಲೇಜಿಗೆ ತೆರಳಿದ ಮೊದಲ ಮಹಿಳೆ ನಾನು. ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ರಾಷ್ಟ್ರಪತಿಯಾಗಿದ್ದೇನೆ. ಸಂವಿಧಾನದ ಮೇಲೆ ಪೂರ್ಣ ನಿಷ್ಠೆ ಇಟ್ಟು ಕೆಲಸ ಮಾಡುವೆ ಎಂದು ಪ್ರತಿಜ್ಞೆ ಮಾಡಿದರು. ಇದನ್ನೂ ಓದಿ: ಗಾಂಜಾ ಗ್ಯಾಂಗ್ ಹಿಡಿಯಲು ಹೋಗಿ ಭೀಕರ ಅಪಘಾತ: ಸ್ವಗ್ರಾಮಕ್ಕೆ ಆಗಮಿಸಿದ ಪಿಎಸ್‍ಐ ಮೃತದೇಹ
ದ್ರೌಪದಿ ಮುರ್ಮು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದವರಾಗಿದ್ದಾರೆ. 20 ಜೂನ್ 1958 ಜನಿಸಿದ ಅವರು ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದು, ಸ್ವಾತಂತ್ರ್ಯೊತ್ತರ ಜನಿಸಿದ ವ್ಯಕ್ತಿಯೊಬ್ಬರು ರಾಷ್ಟ್ರಪತಿಯಾಗಿತ್ತಿರುವುದು ಇದೇ ಮೊದಲು. ದ್ರೌಪದಿ ಮುರ್ಮು ಪದಗ್ರಹಣ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.