ಬೀದರ್: ಬಸ್ ಸೀಟಿಗಾಗಿ (Bus Seat) ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೀದರ್‌ನಿಂದ ಕಲಬುರಗಿ ಬಸ್‌ನಲ್ಲಿಇಬ್ಬರು ಶಕ್ತಿ ಯೋಜನೆ (Shakti Scheme) ಅಡಿ ಉಚಿತ ಟಿಕೆಟ್ (Free Ticket) ಪಡೆದ ಬಳಿಕ ಮಹಿಳೆಯರು ಕಿತ್ತಾಟ ನಡೆಸಿದ್ದಾರೆ. ಓರ್ವ ಮಹಿಳೆ, “ಸೀಟು ಬಿಡು, ಇದು ನನ್ನದು” ಎಂದು ಹೇಳಿದ್ದರೆ ಮತ್ತೊಬ್ಬಳು, “ನಾನು ಸೀಟ್ ಬಿಡಲ್ಲ. ಏನ್ ಮಾಡ್ತಿ” ಎಂದು ಪ್ರಶ್ನಿಸಿದ್ದಾಳೆ. ಇದನ್ನೂ ಓದಿ: ಚೀನಾ ಸಾಲದ ಸುಳಿಗೆ ಬಿದ್ದ ಮಾಲ್ಡೀವ್ಸ್‌ಗೆ ಐಎಂಎಫ್ ಎಚ್ಚರಿಕೆ
ಬಸ್ ಸೀಟಿಗಾಗಿ ಕಿತ್ತಾಟ – ಚಪ್ಪಲಿಯಿಂದ ಹಲ್ಲೆ, ಬಟ್ಟೆ ಹಿಡಿದು ಎಳೆದಾಡಿದ ಮಹಿಳೆಯರು#Bidar #Bus #Women pic.twitter.com/XixeCQpA3s
— PublicTV (@publictvnews) May 15, 2024
ಇಬ್ಬರು ಪರಸ್ಪರ ಮಾತಿನಲ್ಲಿ ಜಗಳ ಮಾಡುತ್ತಿದ್ದರು. ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ ಚಪ್ಪಲಿ ತೆಗೆದು ಜಗಳ ಮಾಡುತ್ತಿದ್ದ ಮಹಿಳೆ ಹೊಡೆದಿದ್ದಾಳೆ.
ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಇದನ್ನೂ ಓದಿ:ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಸುಂದರಿ ಅರೆಸ್ಟ್