ಚಿತ್ರದುರ್ಗ: ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಅಸಹಜವಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಯಾಗಿದ್ದ ಮೃತ ದಿವ್ಯಾ(22) 3 ತಿಂಗಳ ಹಿಂದೆ ಪತಿಯನ್ನು ಬಿಟ್ಟು ಪ್ರಿಯಕರ ಮಂಜುನಾಥ್ ಜೊತೆ ತೆರಳಿದ್ದಳು. ಈಕೆ ಪ್ರಿಯಕರನ ಜೊತೆ ಹಿರಿಯೂರಲ್ಲಿ ವಾಸವಾಗಿದ್ದಳು. ಕಳೆದ ಕೆಲವು ದಿನಗಳಿಂದ ದಿವ್ಯಾಗೆ ಜ್ವರ ಬಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!
ದಿವ್ಯಾ ಮೈ ಮೇಲೆ ಬರೆ ಮತ್ತು ಪರಚಿದ ಗಾಯಗಳಾಗಿದ್ದು, ಈಕೆ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೋಷಕರ ಮಂಜುನಾಥ್ ಮೇಲೆ ಆರೋಪ ಮಾಡುತ್ತಿದ್ದಾರೆ. ಇದೇ ವೇಳೆ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಕೇಳಿದರೆ, ದಿವ್ಯಾ ಸಾವಿನಿಂದ ನೊಂದು ವಿಷ ಸೇವಿಸಿದ್ದೇನೆ ಎಂದಿದ್ದಾನೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.