ಮುಂಬೈ: ತಮ್ಮ ಹೇಳಿಕೆಗಳಿಂದ ಆಗಾಗ ಸುದ್ದಿಯಾಗುವ ಪತಂಜಲಿ ಮುಖ್ಯಸ್ಥ, ಯೋಗ ಗುರು ಬಾಬಾ ರಾಮ್‌ದೇವ್ (Baba Ramdev) ಇದೀಗ ಮಹಿಳೆಯರ ಉಡುಪುಗಳ (Women’s Clothing) ಕುರಿತಾಗಿ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ.
ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ರಾಮ್ ದೇವ್ ಬಾಬಾ, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.
Advertisement
Advertisement
ರಾಮ್‌ದೇವ್ ಅವರು ಈ ಹೇಳಿಕೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಸಮ್ಮುಖದಲ್ಲಿಯೇ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಕೂಡಾ ಭಾಗಿಯಾಗಿದ್ದರು.
Advertisement
ವರದಿಗಳ ಪ್ರಕಾರ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಇದಾದ ಬಳಿಕ ಸಮಾವೇಶ ಆಯೋಜಿಸಲಾಗಿತ್ತು. ಯೋಗ ತರಬೇತಿಯಲ್ಲಿ ಭಾಗಿಯಾಗಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿದ ತಕ್ಷಣವೇ ಸಭೆ ಆರಂಭವಾಗಿತ್ತು. ಇದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯ ಸಿಕ್ಕಿರಲಿಲ್ಲ. ಇದನ್ನೂ ಓದಿ: ಓಲಾ, ಉಬರ್ ಆಟೋಗಳಿಗೆ ಶೇ.5 ಕಮಿಷನ್ ದರ ನಿಗದಿ
Advertisement
(Baba Ramdev Controversial statement).महाराष्ट्र के ठाणे में रामदेव ने कहा ‘साड़ी पहनने की फुर्सत नहीं थी, कोई बात नहीं, अब घर जाकर साड़ी पहनो, महिलाओं को साड़ी पहनना अच्छा लगता है. महिलाएं सलवार सूट में भी अच्छी लगती हैं और मेरी तरह बिना कुछ पहने भी अच्छी लगती हैं.’ pic.twitter.com/0Sw0NJxjUT
— Garima Mehra Dasauni (@garimadasauni) November 25, 2022
ಈ ಕುರಿತು ಹೇಳಿಕೆ ನೀಡಿದ ಬಾಬಾ ರಾಮ್‌ದೇವ್, ಸೀರೆ ಉಡಲು ಸಮಯವಿಲ್ಲದಿದ್ದರೂ ಸಮಸ್ಯೆ ಇಲ್ಲ. ಈಗ ನೀವು ಮನೆಗೆ ಹೋಗಿ ಸೀರೆ ಉಟ್ಟುಕೊಳ್ಳಿ. ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ವತಿಯಿಂದ ಶುಕ್ರವಾರ ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಅಮೃತಾ ಫಡ್ನವೀಸ್ ಉಪಸ್ಥಿತರಿದ್ದರು. ಈ ವೇಳೆ ಬಾಬಾ ರಾಮದೇವ್ ಮಹಿಳೆಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ