ಶಿವಮೊಗ್ಗ: ವ್ಯಾನಿನಲ್ಲಿ ಮದ್ಯ ಮಾರಾಟಕ್ಕೆ ಬಂದವರನ್ನು ಗ್ರಾಮದ ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಬುಧವಾರ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮದಲ್ಲಿ ಕುಡುಕರ ಹಾವಳಿ ಮಿತಿ ಮೀರಿದಾಗ ಗ್ರಾಮಸ್ಥರೆಲ್ಲರೂ ಸಭೆ ಸೇರಿ, ಮದ್ಯ ಮಾರಾಟ ನಿಷೇಧಿಸಲು ತೀರ್ಮಾನ ಕೈಗೊಂಡಿದ್ದರು. ಆದರೆ ಬಿ.ಬೀರಹಳ್ಳಿಯ ಒಂದು ವೈನ್ ಸ್ಟೋರ್ ನವರು ಮಾರುತಿ ಓಮ್ನಿ ಕಾರಿನಲ್ಲಿ ಬಂದು ಗ್ರಾಮದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದರು.
Advertisement
Advertisement
ಅಷ್ಟೇ ಅಲ್ಲದೇ ಗ್ರಾಮದಲ್ಲಿ ಇರುವ ಸಣ್ಣಪುಟ್ಟ ಅಂಗಡಿಗಳಲ್ಲೂ ಮಾರಾಟಕ್ಕೆ ಇಡುತ್ತಿದ್ದರು. ಇದರಿಂದ ರೋಸಿ ಹೋದ ಗ್ರಾಮದ ಯಶೋಧಮ್ಮ, ಲಕ್ಷ್ಮಮ್ಮ, ಗ್ರಾಪಂ ಸದಸ್ಯ ವೀರೇಶ್, ಚಂದ್ರಪ್ಪ, ವಿಜಯ್ ಇನ್ನಿತರರು ಸೇರಿ ವ್ಯಾನ್‍ನನ್ನು ತಡೆಹಿಡಿದಿದ್ದಾರೆ. ಮಾರಾಟಕ್ಕೆ ಬಂದವರಿಗೆ ದಿಗ್ಬಂಧನ ವಿಧಿಸಿ ಪೊಲೀಸರು ಹಾಗೂ ಅಬಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೇ ಇದೂವರೆಗೂ ಮದ್ಯ ಮಾರಾಟದ ಬಗ್ಗೆ ಮಾಹಿತಿ ಇದ್ದರೂ ಕ್ರಮಕೈಗೊಳ್ಳದ ಅಬಕಾರಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
Advertisement
ಈ ಪ್ರಕರಣವನ್ನು ಹೊಳೆಹೊನ್ನೂ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮದ್ಯ ಮಾರಾಟಕ್ಕೆ ಬಂದಿದ್ದ ಅಣ್ಣಪ್ಪ ಹಾಗೂ ಶಿವು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv