ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮದ ದಿನವೇ ಮದ್ಯ ನಿಷೇಧ ಹೋರಾಟ ಶುರುವಾಗಿದ್ದು, ಚಿತ್ರದುರ್ಗದಿಂದ ಜನವರಿ 19ರಂದು ಕಾಲ್ನಡಿಗೆ ಮೂಲಕ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಮಹಿಳೆಯರು ಮಂಗಳವಾರ ಮಧ್ಯಾಹ್ನ ರಾಜ್ಯ ರಾಜಧಾನಿಗೆ ಲಗ್ಗೆಯಿಟ್ಟಿದ್ದಾರೆ.
ಮದ್ಯಪಾನ ನಿಷೇಧಿಸಬೇಕು ಎಂದು ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ಕಾಲ್ನಡಿಯಲ್ಲೇ ಬೆಂಗಳೂರಿಗೆ ಬಂದಿದ್ದಾರೆ. ಸತತ 10 ದಿನಗಳ ಕಾಲ ನಡೆದುಕೊಂದು ಬಂದು ನಿನ್ನೆ ರಾಜಧಾನಿಯನ್ನು ತಲುಪಿದ್ದಾರೆ. ಸದ್ಯ ಮಲ್ಲೇಶ್ವರಂನ ಗ್ರೌಂಡ್‍ನಲ್ಲಿ ವಾಸ್ತವ್ಯ ಹೂಡಿರುವ ಮಹಿಳೆಯರು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದು, ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ಆದ್ರೆ ಪ್ರತಿಭಟನಾನಿರತ ಮಹಿಳೆಯರನ್ನು ಫ್ರೀಡಂ ಪಾರ್ಕ್ ಬಳಿಯೇ ತಡೆಯಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ.
Advertisement
Advertisement
ಮದ್ಯಪಾನ ನಿಷೇಧ ಮಾಡಿ ಅಂತ ಒಂದೆಡೆ ಮಹಿಳೆಯರು ಹೋರಾಟ ಮಾಡಲು ಮುಂದಾಗಿದ್ದರೆ, ಇನ್ನೊಂದೆಡೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. ಈಗಾಗಲೆ 40 ಕಡೆ ಶೌಚಾಲಯ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ಅದು ಸರಿ ಹೊಂದುತ್ತಿಲ್ಲ. ಉಚಿತ ವ್ಯವಸ್ಥೆ ಎಂದು ಹೇಳಿ ಹಣ ಪಡೆಯುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸುತ್ತಿದ್ದಾರೆ. ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv