Connect with us

ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‍ಐ ಕೊರೊನಾಗೆ ಬಲಿ

ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‍ಐ ಕೊರೊನಾಗೆ ಬಲಿ

ಮಂಗಳೂರು: ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಇಂದು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಶಾಮಿಲಿ (24) ಮೃತರಾಗಿದ್ದಾರೆ. ಕೋಲಾರ ಮೂಲದವರಗಿದ್ದು, ಮಂಗಳೂರಿನ ಎಸ್ ಪಿ ಕಚೇರಿಯಲ್ಲಿ ಕಳೆದ ಜನವರಿ 12 ರಂದು ಪ್ರೊಬೇಷನರಿ ಪಿಎಸ್ ಐ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶಾಮಿಲಿ ಕೊರೊನಾ ಮಹಾಮಾರಿಗೆ ಬಲಿಯಾದವರು.

ಶಾಮಿಲಿ 7 ತಿಂಗಳ ಗರ್ಭಿಣಿಯಾಗಿದ್ದ ಹಿನ್ನಲೆಯಲ್ಲಿ ವ್ಯಾಕ್ಸಿನ್ ಪಡೆದಿರಲಿಲ್ಲ. ಕಳೆದ ಎಪ್ರಿಲ್ 20ರಂದು ರಜೆ ಪಡೆದು ಮಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದರು. ಮೇ 2ರಂದು ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Advertisement
Advertisement