ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಅತಿಹೆಚ್ಚು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ (Umashree) ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದಿಂದ (Karnataka Pradesh Mahila Congress) ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ `ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರನ್ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್ ಆಗಿ – ಯುವ ಜನತೆಗೆ ಮೋದಿ ಕರೆ
Advertisement
Advertisement
ಬೆಂಗಳೂರು ಅರಮನೆ ಮೈದಾನದಲ್ಲಿ (Bengaluru Palace Ground) ಜನವರಿ 16ರಂದು `ನಾ ನಾಯಕಿ’ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್ನ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿರೂ ಸೇರಿದಂತೆ ಎಲ್ಲರೂ ಬರಲಿದ್ದಾರೆ. ಇದೇ ವೇಳೆ ಮಹಿಳಾ ಘಟಕದ ಹಲವು ಬೇಡಿಕೆಗಳನ್ನ ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಾಲಿಗೂ ಬೇಗ ಮದುವೆ ಆಗೋಕೆ ಹೇಳಿದ್ದೇನೆ: ವಸಿಷ್ಠ ಸಿಂಹ
Advertisement
Advertisement
ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಹೆಚ್ಚು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಬೇಕು. ಈ ಬಗ್ಗೆ `ನಾ ನಾಯಕಿ’ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದ (Karnataka Pradesh Mahila Congress) ಅಧ್ಯಕ್ಷೆ ಪುಷ್ಪಾ ಅಮರನಾಥ್ (Pushpa Amarnath) ಮಾತನಾಡಿ, ಮಹಿಳೆಯರಿಗಾಗಿ ವಿಶೇಷ ಹಾಗೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಲ್ಲಾಜಮ್ಮ ಸೇರಿದಂತೆ ಇತರ ಮಹಿಳಾ ನಾಯಕಿಯರು ಹಾಜರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k