ಶಿಮ್ಲಾ: ಹಿಮಾಚಲ ಪ್ರದೇಶದ ಎಚ್‍ಆರ್‌ಟಿಸಿ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿರುವುದಾಗಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಘೋಷಿಸಿದ್ದಾರೆ.
75ನೇ ಹಿಮಾಚಲ ಡೇ ಅಂಗವಾಗಿ ಸಿಎಂ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ 50% ರಿಯಾಯಿತಿ ಸೇರಿದಂತೆ 125 ಯೂನಿಟ್ ವರೆಗೆ ಗೃಹಬಳಕೆಯ ವಿದ್ಯುತ್ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಆಗಮನದ ವೇಳೆ ಕೇಬಲ್ ವಯರ್ ಸ್ಫೋಟ – ವರದಿ ಕೇಳಿದ ಗೃಹ ಸಚಿವಾಲಯ
- Advertisement
- Advertisement
ಜಲ ಶಕ್ತಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಿಗೆ ನೀರಿನ ಬಿಲ್‍ನಲ್ಲಿ ರಿಯಾಯಿತಿ ನೀಡಿದ್ದಾರೆ. ಈ ಹಿಂದೆ 60 ಯೂನಿಟ್‍ವರೆಗಿನ ಗೃಹ ಬಳಕೆಯ ವಿದ್ಯುತ್ ಉಚಿತ ಸೇರಿದಂತೆ ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಶೇ.25 ರಿಯಾಯಿತಿ ನೀಡಲಾಗಿತ್ತು. ಇದೀಗ ಈ ರಿಯಾಯಿತಿಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಇದನ್ನೂ ಓದಿ: ಒಂದೇ ಬಾರಿಗೆ 32 ಜನರಿಗೆ ವಾಯ್ಸ್ ಕಾಲ್ – ಹೀಗಿವೆ ವಾಟ್ಸಪ್‌ನ 4 ಹೊಸ ಫೀಚರ್ಸ್
ಹಿಮಾಚಲ ಡೇ ಕಾರ್ಯಕ್ರಮದಲ್ಲಿ ಸಿಎಂ, ಪೊಲೀಸ್ ಹಾಗೂ ಮಿಲಿಟರಿ ಪಡೆಗಳಿಂದ ಧ್ವಜ ವಂದನೆ ಸ್ವೀಕರಿಸಿದರು. ಈ ಮೂಲಕ ಜನಪರ ಕಾರ್ಯಕ್ರಮಗಳನ್ನು ಘೋಷಿಸಿರುವ ಸಿಎಂ ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.