ಬೆಂಗಳೂರು: ನಾಯಿ ವಿಚಾರಕ್ಕೆ ಮಹಿಳೆಯರಿಬ್ಬರು ಪರಸ್ಪರ ಕಿತ್ತಾಡಿಕೊಂಡು ಪೊಲೀಸ್ (Police) ಠಾಣೆಗೆ ಹೋಗಿರುವ ಘಟನೆ ಬೆಂಗಳೂರಿನ (Bengaluru) ಜೀವನ್ ಭೀಮಾ ನಗರದಲ್ಲಿ ನಡೆದಿದೆ.
ಪಂಜಾಬ್ ಮೂಲದ ಪೂಜಾ ಕಪೂರ್ ಕಳೆದ ಒಂದೂವರೆ ವರ್ಷದಿಂದ ಪ್ರಮೀಳಾ ಎಂಬವರ ಮನೆಯಲ್ಲಿ ಭೋಗ್ಯಕ್ಕೆ (Lease) ಇದ್ದಾರೆ. ಪೂಜಾ ಒಂದು ನಾಯಿಯನ್ನು ಸಾಕಿಕೊಂಡಿದ್ದಾರೆ. ನಾಯಿ ಕೊಳಕು ಮಾಡುತ್ತದೆ ಮತ್ತು ಸರಿಯಾಗಿ ಸ್ವಚ್ಚಗೊಳಿಸುವುದಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕರಾದ ಪ್ರಮೀಳಾ ಹಾಗೂ ಪೂಜಾ ನಡುವೆ ಆಗಾಗ ಜಗಳ ನಡೆಯುತಿತ್ತು. ಇದನ್ನೂ ಓದಿ: ಶಾಲೆ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ – 1ಂಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು
Advertisement
Advertisement
ಎರಡು ದಿನಗಳ ಹಿಂದೆ ನಾಯಿ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಆಗ ಇಬ್ಬರ ನಡುವೆ ಮಾತಿಗೆ ಬೆಳೆದು ಕೊನೆಗೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಪೂಜಾ ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಎಕ್ಸ್ ಖತೆಯಲ್ಲಿ ಬರೆದುಕೊಂಡಿದ್ದಾರೆ. ಪೂಜಾ ಎಕ್ಸ್ನಲ್ಲಿ ಗಲಾಟೆ ಕುರಿತು ವೀಡಿಯೋ ಹಾಕಿದ್ದು, ಅದನ್ನು ಪೊಲೀಸ್ ಕಮಿಷನರ್‌ಗೆ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ – ಪ್ರತಿ ಕಿಮೀಗೆ 24 ರಿಂದ 28 ರೂ.ವರೆಗೆ ಏರಿಕೆಗೆ ಅವಕಾಶ
Advertisement
Advertisement
ಜೀವನ್ ಭೀಮಾನಗರದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿದೂರು ದಾಖಲಿಸಿಕೊಂಡು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು