ಮಂಗಳೂರು: ಮಹಿಳೆಯರಿಬ್ಬರು ಹೈವೇ ರಸ್ತೆಗೆ ಸ್ಕೂಟರ್ ನುಗ್ಗಿಸುವ ಯತ್ನದಲ್ಲಿ ಇನ್ನೋವಾ ಕಾರಿಗೆ ಡಿಕ್ಕಿಯಾಗಿ, ರಸ್ತೆಯಿಂದ ಹೊರಕ್ಕೆಸೆಯಲ್ಪಟ್ಟರೂ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಪೇಟೆ ಬಳಿಯ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆ ತನ್ನ ಸ್ಕೂಟರ್ ಗೆ ಪೆಟ್ರೋಲ್ ಹಾಕಿಸಿಕೊಂಡು ನೇರವಾಗಿ ರಸ್ತೆಗೆ ನುಗ್ಗಿಸಿದ್ದು ಎದುರು ಭಾಗದಿಂದ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರು ಮಹಿಳೆಯರೂ ಸ್ಕೂಟರ್ ಸಹಿತ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಅದೃಷ್ಟವಶಾತ್ ಮಹಿಳೆಯರಿಗೆ ಹೆಚ್ಚಿನ ಗಾಯಗಳಾಗಿಲ್ಲ. ಹೆಲ್ಮಟ್‍ನ್ನು ಹಾಕಿಕೊಂಡಿರದ ಮಹಿಳೆಯರು ಅಪಘಾತದಲ್ಲಿ ಸಿನಿಮೀಯ ರೀತಿಯಲ್ಲಿ ಬಚಾವಾಗಿದ ದೃಶ್ಯ ಪವಾಡ ಎನ್ನುವಂತಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv