ಮುಂಬೈ: ಸಂಘಟಿತ ಬೌಲಿಂಗ್, ಬ್ಯಾಟಿಂಗ್ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ (Mumbai Indians) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್‌ನ ಕೊನೆಯ ಪಂದ್ಯವಾಡಿದ ಆರ್‌ಸಿಬಿ ಸೋಲಿನೊಂದಿಗೆ ವಿದಾಯ ಹೇಳಿದೆ. ಇದನ್ನೂ ಓದಿ: WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್
Advertisement
Advertisement
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂದಾನ (Smriti Mandhana) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. 126 ರನ್‌ಗಳ ಗುರಿ ಪಡೆದ ಎದುರಾಳಿ ಮುಂಬೈ ತಂಡವು 16.3 ಓವರ್‌ಗಳಲ್ಲೇ 6 ವಿಕೆಟ್ ನಷ್ಟಕ್ಕೆ 129 ರನ್ ಚಚ್ಚಿ ಮತ್ತೆ ಅಗ್ರಸ್ಥಾನಕ್ಕೇರಿತು. ಇದನ್ನೂ ಓದಿ: WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್ ಪ್ಲೆ ಆಫ್‌ಗೆ – RCB ಮನೆಗೆ
Advertisement
Advertisement
ಆರಂಭಿಕರಾಗಿ ಕಣಕ್ಕಿಳಿದ ಹೇಲಿ ಮ್ಯಾಥಿವ್ಸ್ 17 ಎಸೆತಗಳಲ್ಲಿ 24 ರನ್ ಗಳಿಸಿದರೆ, ಯಸ್ತಿಕಾ ಭಾಟಿಯಾ 26 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ಆದರೆ ಮಧ್ಯಂತರದಲ್ಲಿ ನಾಟ್ ಸ್ಕಿವರ್ ಬ್ರಂಟ್ (13 ರನ್), ನಾಯಕಿ ಹರ್ಮನ್ ಪ್ರೀತ್‌ಕೌರ್ (2 ರನ್) (Harmanpreet Kaur) ವಿಕೆಟ್ ಕಳೆದುಕೊಂಡು ಮತ್ತೆ ಸಂಕಷ್ಟಕ್ಕೀಡಾಯಿತು. ನಂತರ ಕ್ರೀಸ್‌ಗಿಳಿದ ಅಮೇಲಿ ಕೇರ್ 27 ಎಸತೆಗಳಲ್ಲಿ 4 ಬೌಂಡರಿಯೊಂದಿಗೆ ಅಜೇಯ 31 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು. ಕೊನೆಯಲ್ಲಿ ಪೂಜಾ ವಸ್ತ್ರಾಕರ್ 19 ರನ್ ಗಳಿಸಿ ತಂಡಕ್ಕೆ ನೆರವಾದರು.
ಆರ್‌ಸಿಬಿ ಪರ ಮೇಗನ್ ಶುಟ್, ಶ್ರೇಯಾಂಕ ಪಾಟೀಲ್, ಎಲ್ಲಿಸ್ ಪರ‍್ರಿ, ಸೋಭಾನಾ ಆಶಾ ತಲಾ ಒಂದೊಂದು ವಿಕೆಟ್ ಪಡೆದರೆ, ಕನಿಕಾ ಅಹುಜಾ 2 ವಿಕೆಟ್ ಕಿತ್ತರು.
ಇದಕ್ಕೂ ಮುನ್ನ ಆರ್‌ಸಿಬಿ ತಂಡದಿಂದ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂದಾನ, ಸೋಫಿ ಡಿವೈನ್ ಕೊನೆಯ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರಿಸಿದರು. ಮೊದಲ ಓವರ್‌ನ 3ನೇ ಎಸೆತದಲ್ಲಿ ರನ್ ಕದಿಯಲು ಯತ್ನಿಸಿ ಸೋಫಿ ಡಿವೈನ್ ರನೌಟ್‌ಗೆ ತುತ್ತಾದರು. ನಂತರ ಬಂದ ಎಲ್ಲಿಸ್ ಪರ‍್ರಿ 38 ಎಸೆತಗಳಲ್ಲಿ 29 ರನ್ ಗಳಿಸಿದರೆ, ನಾಯಕಿ ಸ್ಮೃತಿ ಮಂದಾನ 25 ಎಸೆತಗಳಲ್ಲಿ 24 ರನ್ ಬಾರಿಸಿ ಔಟಾದರು. ಹೀದರ್ ನೈಟ್ 12 ರನ್, ಕನಿಕಾ ಅಹುಜಾ 12 ರನ್ ಮತ್ತು ಕೊನೆಯಲ್ಲಿ ರಿಚಾ ಘೋಷ್ 13 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಆರ್‌ಸಿಬಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಮುಂಬೈ ಪರ ಬೌಲಿಂಗ್‌ನಲ್ಲಿ ಅಮೆಲಿಯಾ ಕೆರ್ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ನಾಟ್ ಸೀವರ್-ಬ್ರಂಟ್, ಇಸ್ಸಿ ವಾಂಗ್ ತಲಾ 2 ವಿಕೆಟ್ ಹಾಗೂ ಸೈಕ್ ಇಶಾಕ್ 1 ವಿಕೆಟ್ ಪಡೆದು ಮಿಂಚಿದರು.
ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ:
ಮಹಿಳಾ ಪ್ರೀಮಿಯರ್ ಲೀಗ್‌ನ ಆರಂಭಿಕ 5 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ ಆರ್‌ಸಿಬಿ 6, 7ನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಕನಸು ಜೀವಂತವಾಗಿಸಿಕೊಂಡಿತ್ತು. ಆದರೆ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಯುಪಿ ವಾರಿಯರ್ಸ್ ತಂಡ 7ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದ ನಂತರ ಆರ್‌ಸಿಬಿ ಪ್ಲೆ ಆಫ್ ಕನಸು ಭಗ್ನಗೊಂಡಿತು. ಕೊನೆಯ ಪಂದ್ಯದಲ್ಲೂ ಹೀನಾಯವಾಗಿ ಸೋತು ಅಭಿಮಾನಿಗಳಿಗೆ ಭಾರೀ ನಿರಾಸೆ ತರಿಸಿತು.