ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ.
ನಾಳೆ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಭಾನುವಾರ (ಸೆ.17) ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಹಳೆ ಸಂಸತ್ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ
Advertisement
Advertisement
ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.
Advertisement
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಇದನ್ನೂ ಓದಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ
Advertisement
ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು.
Web Stories