ನವದೆಹಲಿ: ಹೊಸ ಸಂಸತ್ ಭವನದ (New Parliament House) ಲೋಕಸಭೆಯಲ್ಲಿ (Lok Sabha) ಮೊದಲ ದಿನದ ವಿಶೇಷ ಅಧಿವೇಶನ (Special Session) ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದರು.
ಮಂಗಳವಾರ ಹೊಸ ಸಂಸತ್ ಭವನದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಪ್ರಕಟಿಸಿದರು. ಅಲ್ಲದೇ ಮಸೂದೆಯನ್ನು ಅಂಗೀಕರಿಸಲು ಮತ್ತು ನಾರಿಶಕ್ತಿ ಪ್ರಾತಿನಿಧ್ಯವನ್ನು ಖಾತ್ರಿಪಡಿಸಿಕೊಳ್ಳಲು ಸಹಾಯ ಮಾಡುವಂತೆ ಎಲ್ಲಾ ಸದಸ್ಯರನ್ನು ಒತ್ತಾಯಿಸಿದರು. ಇದನ್ನೂ ಓದಿ: 5 ದಿನ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ
Advertisement
Advertisement
ನಾರಿಶಕ್ತಿ ವಂದನ್ ಅಧಿನಿಯಮ್ ಹೆಚ್ಚು ಮಹಿಳೆಯರು ಸಂಸತ್ತು, ಅಸೆಂಬ್ಲಿಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ ಎಂದು ಮೋದಿ ತಿಳಿಸಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಿಂದಿನ ಸರ್ಕಾರಗಳು ಈ ಮಸೂದೆಯನ್ನು ಅಂಗೀಕರಿಸಲು ವಿಫಲವಾಗಿದೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ
Advertisement
Advertisement
ಈ ಹಿಂದೆಯೂ ಸಂಸತ್ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದೆ. ವರ್ಷಗಳಿಂದ ಮಹಿಳಾ ಮೀಸಲಾತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ಇತಿಹಾಸವನ್ನು ಸ್ಕ್ರಿಪ್ಟ್ ಮಾಡಿದ್ದೇವೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಅಸಂಬದ್ಧ, ಪ್ರೇರಿತ- ಕೆನಡಾ ಆರೋಪ ತಿರಸ್ಕರಿಸಿದ ಭಾರತ
ವಾಜಪೇಯಿ (Atal Bihari Vajpayee) ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಯಿತು. ಆದರೆ ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರದ ಕಾರಣ ಈ ಕನಸು ಅಪೂರ್ಣವಾಯಿತು. ಇದನ್ನು ಮುಂದಕ್ಕೆ ಕೊಂಡೊಯ್ಯಲು ದೇವರು ನನಗೆ ಅವಕಾಶ ನೀಡಿದ್ದಾನೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಕುರಿತು ಹೊಸ ಮಸೂದೆಯನ್ನು ತರುತ್ತಿರುವುದಕ್ಕೆ ನಮಗೆ ಸಂತಸವಾಗುತ್ತಿದೆ ಎಂದರು. ಇದನ್ನೂ ಓದಿ: ಹಳೆ ಸಂಸತ್ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್ – ಸುಂದರ ನೆನಪುಗಳೊಂದಿಗೆ ವಿದಾಯ
ನಾಳೆ ಸಂಸತ್ತಿನಲ್ಲಿ ಚರ್ಚೆ:
ಕೇಂದ್ರ ಸಚಿವ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠಾವಳೆ ಈ ಕುರಿತು ಮಾತನಾಡಿ, ನಾಳೆ ಈ ಮಸೂದೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ ಎಂದರು. ಸುಮಾರು 27 ವರ್ಷಗಳ ಕಾಯುವಿಕೆಯ ನಂತರ ಮಹತ್ವದ ಬೆಳವಣಿಗೆಯನ್ನು ಗುರುತಿಸುವ ಮೂಲಕ ದೀರ್ಘಾವಧಿಯಿಂದ ಬಾಕಿ ಉಳಿದಿರುವ ಮಸೂದೆ ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ
Web Stories