ಬೆಂಗಳೂರು: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಧೇಯಕ್ಕೆ (Women’s Reservation Bill) ಒಪ್ಪಿಗೆ ನೀಡಿರುವುದು ಒಂದು ಕ್ರಾಂತಿಕಾರಿ ನಿರ್ಣಯ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, 2009ರಲ್ಲಿ ಯುಪಿಎ (UPA) ಅವಧಿಯಲ್ಲಿ ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಯುಪಿಎ ಸದಸ್ಯ ಪಕ್ಷಗಳೇ ಒಪ್ಪಿರಲಿಲ್ಲ ಎಂದರು. ಇದನ್ನೂ ಓದಿ: ಆಸ್ತಿ ನೋಂದಣಿ ಮಾರ್ಗಸೂಚಿ ದರ ಹೆಚ್ಚಳ – ಅಕ್ಟೋಬರ್ 1 ರಿಂದ ಜಾರಿ: ಕೃಷ್ಣಭೈರೇಗೌಡ
ಇನ್ನು ಜನಸಂಖ್ಯೆಯಲ್ಲಿ 50%ರಷ್ಟಿರುವ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುತ್ತಿರುವುದು ಒಂದು ಕ್ರಾಂತಿಕಾರಕ ನಡೆ. ಕಾಂಗ್ರೆಸ್ (Congress) ಇದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೇವಲ ಮಸೂದೆ ಸಿದ್ಧಪಡಿಸುವುದು ಮಾತ್ರವಲ್ಲ. ಎಲ್ಲಾ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ. ಕೇಂದ್ರ ಸರ್ಕಾರ ಈಗ ಎಲ್ಲರ ಒಪ್ಪಿಗೆ ಪಡೆದು ಕಾಯ್ದೆಯಾಗಿ ಜಾರಿಗೆ ತರುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!
Web Stories