ಚಿತ್ರದುರ್ಗ: ಸಾರಿಗೆ ಬಸ್ ನಿರ್ವಾಹಕನನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ಧರ್ಮಸ್ಥಳದಲ್ಲಿ (Dharmasthala) ನಡೆದಿದ್ದು, ಘಟನೆಯ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ರಾಜ್ಯ ಸರ್ಕಾರ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರಂಟಿ ನೀಡಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭಾನುವಾರ ಮಹಿಳೆಯರು ಹೇರಳವಾಗಿ ಧಾವಿಸಿದ್ದರು. ಈ ವೇಳೆ ಮಹಿಳೆಯರಿಗೆ ಅವಕಾಶ ನೀಡದೆ ಸಾರಿಗೆ ಬಸ್ ಸಂಚಾರ ಮಾಡುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳೆಯರು ಸಾರಿಗೆ ಬಸ್‌ನ ಕಂಡಕ್ಟರ್ (Bus Conductor) ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ
Advertisement
Advertisement
ಉಚಿತ ಪ್ರಯಾಣ ಎಂದು ಮಹಿಳೆಯರು ಸಾರಿಗೆ ಬಸ್‌ನಲ್ಲಿ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಆರಂಭಿಸಿದ್ದಾರೆ. ಅದೇ ರೀತಿ ಮಹಿಳಾಮಣಿಗಳು ಧರ್ಮಸ್ಥಳಕ್ಕೂ ಭೇಟಿ ನೀಡಿದ್ದಾರೆ. ಈ ವೇಳೆ ಧರ್ಮಸ್ಥಳದಿಂದ ಚಿತ್ರದುರ್ಗ (Chitradurga) ಮಾರ್ಗವಾಗಿ ಹೊಸಪೇಟೆಗೆ (Hospet) ಹೊರಟಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿನ ತುಂಬಾ ಪುರುಷರನ್ನೇ ಹತ್ತಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಹೊರಿಸಿ ಮಹಿಳೆಯರು ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ
Advertisement
Advertisement
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡಿರುವ ಉಚಿತ ಪ್ರಯಾಣ ಗ್ಯಾರಂಟಿಯಿಂದಾಗಿ ಬಸ್ ನಿರ್ವಾಹಕರು ಭಾರೀ ಸಮಸ್ಯೆ ಎದುರಿಸುವಂತಾಗಿದೆ. ಏಕಾಏಕಿ ಮಹಿಳೆಯರು ಸರ್ಕಾರಿ ಬಸ್‌ಗೆ ಮುಗಿಬೀಳುವುದರಿಂದ ಪ್ರಾಣಭಯದಿಂದ ಕರ್ತವ್ಯ ನಿರ್ವಹಿಸುವಂತಾಗಿದೆ ಎಂದು ಬಸ್ ನಿರ್ವಾಹಕರು ಆತಂಕ ಹೊರಹಾಕಿದ್ದು, ಸಿಬ್ಬಂದಿಯ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನೌಕರರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫೋನ್‍ನಲ್ಲಿ ಮಾತನಾಡುತ್ತಾ ಬಸ್ ಓಡಿಸಿದ ಚಾಲಕ- 26 ಮಂದಿಗೆ ಗಾಯ, ಇಬ್ಬರು ಗಂಭೀರ