ಡಿ ಗ್ಯಾಂಗ್ ಕೊಲೆ ಕೇಸ್: ನಾನು, ಸಿಎಂ ಯಾರಿಗೂ ಸೊಪ್ಪು ಹಾಕಲ್ಲ: ಗೃಹ ಸಚಿವ ಪರಮೇಶ್ವರ್

Public TV
1 Min Read
PARAMESHWAR

ಬೆಂಗಳೂರು: ದರ್ಶನ್ ಕೇಸ್ (Dasrhan Gang Murder Case) ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ (Karnataka Home Minister Parameshwar) ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂತೇಳಿದ್ರು. ಇದನ್ನೂ ಓದಿ: ಈ ರೀತಿಯ ಕ್ರೂರತನ ನಾನು ನೋಡಿಯೇ ಇಲ್ಲ, ಅನಗತ್ಯವಾಗಿ ತುಟಿ ಬಿಚ್ಚಬೇಡಿ – ಮಂತ್ರಿಗಳಿಗೆ ಸಿಎಂ ವಾರ್ನಿಂಗ್‌

ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂತೇಳಿದ್ರು. ಇದನ್ನೂ ಓದಿ: ದರ್ಶನ್‌ ಬಳಿ 70 ಲಕ್ಷ ರೂ. ಪತ್ತೆ – ʻದಾಸʼನಿಗೆ ಕೊಲೆ ಆರೋಪದ ಜೊತೆಗೆ ಐಟಿ ಸಂಕಷ್ಟ!

ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.

Share This Article