ಲಕ್ನೋ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‍ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
Advertisement
ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅಖಿಲೇಶ್ ಅವರು, ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ (ಆರ್‌ಎಲ್‍ಡಿ) ಪಕ್ಷದ ಮೈತ್ರಿಯೊಂದಿಗೆ ಚುನಾವಣೆ ಎದುರಿಸುವುದು ಅಂತಿಮವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌಪ್ಯವಾಗಿ ಬೂಸ್ಟರ್ ಡೋಸ್ ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ
Advertisement
ಆರ್‌ಎಲ್‍ಡಿಯೊಂದಿಗೆ ಎಸ್‍ಪಿ ಪಕ್ಷದ ಮೈತ್ರಿ ಅಂತಿಮವಾಗಿದೆ. ಅಷ್ಟೇ ಅಲ್ಲದೇ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಕೂಡ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
Advertisement
ಅಜಮ್‍ಗಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಎಸ್‍ಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಅಖಿಲೇಶ್, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಿಸ್ ಕೇರಳ ಸುಂದರಿಯರ ದುರಂತ ಅಂತ್ಯ
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷದ ಲೋಹಿಯಾ (ಪಿಎಸ್‍ಪಿಎಲ್) ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದರಿಂದ ನನಗೆ ಯಾವುದೇ ತೊಂದರೆಯಿಲ್ಲ. ಅವರು (ಶಿವಪಾಲ್ ಯಾದವ್) ಮತ್ತು ಜನತೆಗೆ ಸೂಕ್ತ ಸ್ಥಾನಮಾನ, ಗೌರವ ನೀಡಲಾಗುವುದು ಎಂದು ತಿಳಿಸಿದ್ದಾರೆ.