ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

Public TV
1 Min Read
wont give up two language policy even if rs 2000 cr is lost tamil nadu minister thangam thenarasu

ಚೆನ್ನೈ: ನಮ್ಮ ಸರ್ಕಾರ ದ್ವಿಭಾಷಾ ನೀತಿಗೆ (Two Language Policy) ಬದ್ಧವಾಗಿದೆ. ಕೇಂದ್ರದ 2 ಸಾವಿರ ಕೋಟಿ ರೂ. ನಿಧಿಯನ್ನು ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ತಮಿಳುನಾಡು (Tamil Nadu) ಸರ್ಕಾರ ತನ್ನ ಬಜೆಟ್‌ನಲ್ಲಿ ಹೇಳಿಕೊಂಡಿದೆ.

ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ದ್ರಾವಿಡ ಮುನ್ನೇತ್ರ ಕಳಗಂ (DMK) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ (Budget) ಅನ್ನು ಇಂದು ವಿಧಾನಸಭೆಯಲ್ಲಿ ಹಣಕಾಸು ಸಚಿವ ತಂಗಮ್ ತೆನರಸು ಮಂಡಿಸಿದರು. ಇದನ್ನೂ ಓದಿ: ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು

 

ಈ ವೇಳೆ ತಮಿಳುನಾಡು ತನ್ನ ಸ್ವಾಭಿಮಾನವನ್ನು ರಕ್ಷಿಸಿಕೊಳ್ಳುವಲ್ಲಿ ದೃಢವಾಗಿ ನಿಲ್ಲುತ್ತದೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಮಿಳುನಾಡು ಆರ್ಥಿಕ ಸಹಾಯಕ್ಕಾಗಿ ತನ್ನ ನಿಲುವನ್ನು ಕೈಬಿಡುವುದಿಲ್ಲ. ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳಲು ನಾವು ನಿರಾಕರಿಸಿದ ಕಾರಣ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಯೋಜನೆಯಡಿ ಕೇಂದ್ರವು 2 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತಡೆಹಿಡಿದರೆ ನಮ್ಮ ಸರ್ಕಾರ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹಣವನ್ನು ನೀಡುತ್ತದೆ. ಶಿಕ್ಷಕರ ವೇತನವನ್ನು ತನ್ನ ಸ್ವಂತ ಸಂಪನ್ಮೂಲಗಳ ಬಳಸಿ ಪಾವತಿಸುತ್ತದೆ ಎಂದು ಅವರು ತಿಳಿಸಿದರು.

ತಮಿಳುನಾಡು ಸರ್ಕಾರದ ಬಜೆಟ್ ಮಂಡನೆ ವೇಳೆ ಎಐಎಡಿಎಂಕೆ ಸಭಾತ್ಯಾಗ ಮಾಡಿತು.

Share This Article