ರಾಮನಗರ: ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸಲ್ಲ ಎಂದು ಚೆಲುವರಾಯಸ್ವಾಮಿ ಹೇಳಿದರು.
Advertisement
ಕೆಂಗಲ್ ಆಂಜನೇಯಸ್ವಾಮಿ ದೇವಾಲಯದ ಬಳಿಯ ಕಲ್ಯಾಣ ಮಂಟಪದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಮಾಡುವ ಬದ್ಧತೆಯನ್ನು ರಾಜ್ಯ ಸರ್ಕಾರ ಕೊಡುತ್ತಿಲ್ಲ. ಕೋರ್ಟ್ ಸೂಚನೆ ಮಾಡಿರುವುದು ಅವರು ಇಲ್ಲಿಯವರೆಗೆ ಮಾಡಿರುವ ವರದಿಯನ್ನು ಕೇಳಿದೆ. ಆದರೆ ಇವರು ರಸ್ತೆಯಲ್ಲಿ ಬರುವ ವಾಹನಗಳನ್ನು ತಡೆಯುತ್ತಿದ್ದಾರೆ. ನಾವು ಕೋರ್ಟ್‍ಗೆ ಈ ಬಗ್ಗೆ ಅಭಿಪ್ರಾಯ ತಿಳಿಸುತ್ತೇವೆ ಅಂತಾ ಹೇಳಿದ್ದೇವೆ. ಆದರು ಇವರು ಪ್ರಜಾಪ್ರಭುತ್ವ ಸರ್ಕಾರದಲ್ಲಿ ಎಲ್ಲರನ್ನು ತಡೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು
Advertisement
Advertisement
ನಾವು ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಎರಡೂವರೆ ವರ್ಷದಲ್ಲಿ ಅರ್ಧದಷ್ಟು ನಿರ್ಮಾಣ ಮಾಡಬಹುದಿತ್ತು. ನಾವು ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಮ್ಮ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾವು ಬದ್ಧರಾಗಿದ್ದೇವೆ. ನಾವು 5 ಜನವಾದರೂ ಪಾದಯಾತ್ರೆ ಮಾಡಿ ಮುಗಿಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್
Advertisement
ಗಣಿಗ ರವಿಕುಮಾರ್, ಇಕ್ಬಾಲ್ ಹುಸೇನ್, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರ ಸ್ವಾಮಿ, ಸೇರಿದಂತೆ ಇನ್ನೂ ಹಲವಾರು ರೈತ ಮುಖಂಡರು ಈ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.