– ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ
ದಾವಣಗೆರೆ: ಕರ್ನಾಟಕದಲ್ಲಿ ಹಲವು ನಾಯಕರು ಮೋದಿ (Narendra Modi) ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ. ರಾಜ್ಯ ನಾಯಕರ ಕೊಡುಗೆ ಏನ್ ಇದೆ? ಎಂದು ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ಸ್ವಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಮೋದಿಯವರ ಜನಪ್ರಿಯ ಕಾರ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿಲ್ಲ. ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ನಮ್ಮ ರಾಜ್ಯದ ನಾಯಕರನ್ನು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ಪ್ರಚಾರ ಮಾಡ್ತಾ ಇದ್ದಾರೆ. ಜನ ಸಾಮಾನ್ಯರು ಕೇಳ್ತಾ ಇದ್ದಾರೆ ರಾಜ್ಯ ನಾಯಕರನ್ನು ನೇಮಕ ಮಾಡಿಲ್ಲ ಎಂದು. ಕರ್ನಾಟಕದ ಬಿಜೆಪಿ ಆಡಳಿತವನ್ನು ಎಲ್ಲೋ ಒಂದು ಕಡೆ ಯಾರೋ ಒಬ್ಬರು ನಿಯಂತ್ರಣ ಮಾಡ್ತಾ ಇದ್ದಾರೆ. ಇದೇ ರೀತಿ ಮುಂದುವರಿದರೆ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಗುಡುಗಿದರು.
Advertisement
Advertisement
ಪಕ್ಷದಲ್ಲಿ ನಾಯಕರು ಇಲ್ಲ ಎಂದು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಆದರೆ ಹೋಗುವವರು ಹೋಗಲಿ, ಇರುವವರು ಇರಲಿ ಎಂದು ದುರಹಂಕಾರದ ಮಾತುಗಳನ್ನಾಡುತ್ತಿದ್ದಾರೆ. ಇದನ್ನೆಲ್ಲ ಬಿಡಬೇಕು. ಪಕ್ಷ ಸಂಘಟನೆ ಮಾಡಬೇಕು ಎಂದು ಸಂಸದ ಜಿಎಂ ಸಿದ್ದೇಶ್ವರ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.
Advertisement
ಚಂದ್ರಯಾನ ಲ್ಯಾಂಡಿಂಗ್ ಆಗಿರುವುದು ಒಂದು ದೊಡ್ಡ ಸಾಧನೆ. ಇಸ್ರೋ ವಿಜ್ಞಾನಿಗಳ ಸಾಧನೆ ಪ್ರಶಂಸನೀಯ. ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿರುವ ಪ್ರಥಮ ರಾಷ್ಟ್ರ. ಇಂತಹ ಸಾಧನೆಗಳನ್ನು ಮನೆ ಮನೆಗೆ ತಿಳಿಸಬೇಕು. ಇವುಗಳನ್ನು ಮತಗಳನ್ನಾಗಿ ಪರಿವರ್ತಿಸಬೇಕು. ಆದರೆ ನಮ್ಮ ನಾಯಕರು ಭ್ರಮಾಲೋಕದಲ್ಲಿದ್ದಾರೆ. ಕಳೆದ ಚುನಾವಣೆ ಏನಾಗಿದೆ ಎನ್ನುವುದು ನೋಡಿಕೊಳ್ಳಲಿ ಎಂದರು.
Advertisement
ಮೋದಿ ವಿಶ್ವನಾಯಕ. ಆದರೆ ಕಾರ್ಯಕರ್ತರ ಹಾಗೂ ರಾಜ್ಯ ನಾಯಕರ ಕೊಡುಗೆ ಏನು? ಹಿಂದೆ ಅಟಲ್ ಬಿಹಾರಿ ವಾಜಪೇಯಿಯವರ ಸೋಲಿಗೆ ನಾವೇ ಕಾರಣ. ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವರು ಜಾಸ್ತಿ ಜನ ಇದ್ದಾರೆ. ಕರ್ನಾಟಕದಲ್ಲಿ ಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ ಎಂದರು. ಇದನ್ನೂ ಓದಿ: ಗಣೇಶೋತ್ಸವದ ಲಾಟರಿ ಖರೀದಿಗೆ ಮುಗಿಬಿದ್ದ ಜನ- ಕಿ.ಮೀ ಉದ್ದದ ಸಾಲು
ನಾನು ಬಕೆಟ್ ಹಿಡಿಯುವ ರಾಜಕಾರಣ ಮಾಡೋದಿಲ್ಲ. ರಾಜ್ಯ ನಾಯಕರು ಪಾರ್ಟಿ ಮೀಟಿಂಗ್ ಕರೆಯಲು ತಯಾರಿಲ್ಲ. ಸಮಸ್ಯೆ ಕೇಳೋರಿಲ್ಲ, ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ. ಬಿಜೆಪಿ ಪಾರ್ಟಿ ಆಫೀಸ್‌ನಿಂದ ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ. ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದೆವು. ಆದರೆ ಆ ಪರಿಸ್ಥಿತಿ ನಮಗೆ ಬಂದಿದೆ. ನಾನು ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡೋದಿಲ್ಲ. ಕರಪತ್ರ ಹಂಚಿಕೊಂಡು ಬೂಟಾಟಿಕೆ ಮಾಡ್ತಿನಾ? ನಾನು ಕ್ಷೇತ್ರದ ಸಮಸ್ಯೆಗಾಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರೆ ಏನು ತಪ್ಪು ಎಂದು ಪ್ರಶ್ನಿಸಿದರು.
ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್ ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ. ಆದು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ. ಅದನ್ನು ಖಂಡಿಸುತ್ತೇನೆ. ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಪಕ್ಷಕ್ಕೆ ಶಾಪವಾಗಿದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ. ಈ ಬೆಳವಣಿಗೆಯಿಂದ ಯಡಿಯೂರಪ್ಪನವರಿಗೆ ನೋವಾಗಿದೆ. ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತನಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಬಿಂಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ. ಯಾರು ಬಕೆಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಒಬ್ಬ ಮಹಾನ್ ನಾಯಕ ತಪ್ಪಿಸಿದ್ದಾರೆ. ವಿಜಯೇಂದ್ರ ಅವರಿಗೆ ಸಾಮರ್ಥ್ಯ ಇದೇ ಅವರಿಗೆ ಅವಕಾಶ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಾತಿ ಕಟ್ಟು ಪಾಡುಗಳನ್ನ ಮೀರಲು ಮಾನವೀಯತೆ, ವಿಚಾರವಂತಿಕೆಯ ದಾರಿ – ಮರ್ಯಾದಾ ಹತ್ಯೆಗೆ ಸಿಎಂ ಆತಂಕ
Web Stories